spot_img
Tuesday, March 24, 2026
spot_img

ಜಿ.ಪಂ ಮಾಜಿ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ ಬಿಜೆಪಿ ಸೇರ್ಪಡೆ

 

ವಂಡ್ಸೆ, ಸೆ.2: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಹಿರಿಯ ಕಾಂಗ್ರೆಸಿಗ, ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ ಅವರು ಸೆ.2ರಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಹರ್ಕೂರು ಮಂಜಯ್ಯ ಶೆಟ್ಟಿಯವರನ್ನು ಬಿಜೆಪಿಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ.ಸದಸ್ಯರಾದ ರೋಹಿತ್ ಕುಮಾರ್ ಶೆಟ್ಟಿ, ಶಂಕರ ಪೂಜಾರಿ, ಶೋಭಾ ಜಿ. ಪುತ್ರನ್, ತಾ.ಪಂ ಸದಸ್ಯ ಉಮೇಶ್ ಶೆಟ್ಟಿ ಕಲ್ಗದ್ದೆ, ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಜೆಡ್ಡು, ಉಪಾಧ್ಯಕ್ಷ ಸಾಮ್ರಾಟ್ ಶೆಟ್ಟಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!