spot_img
Monday, March 16, 2026
spot_img

ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಒಪ್ಪಿಗೆ !

ಜನಪ್ರತಿನಿಧಿ (ನವದೆಹಲಿ) : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ

ಕಾಂಗ್ರೆಸ್ ನಾಯಕರಿಂದ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಮನವಿ ಬಂದಿದ್ದು, ಈ ಮನವಿಯನ್ನು ಸ್ವೀಕರಿಸಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಮಾರಕ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಿದ್ದಾರೆಂದು ತಿಳಿಸಿದೆ.

ಸ್ಮಾರಕಕ್ಕಾಗಿ ಟ್ರಸ್ಟ್ ರಚನೆ ಮತ್ತು ಜಾಗದ ಹಂಚಿಕೆಯನ್ನು ಅಂತಿಮಗೊಳಿಸಿರುವುದರಿಂದ, ಅಂತ್ಯಕ್ರಿಯೆ ಮತ್ತು ಔಪಚಾರಿಕತೆಗಳು ಈ ಮಧ್ಯೆ ಮುಂದುವರಿಯಬಹುದು ಎಂದು ಗೃಹ ಸಚಿವಾಲಯ ಹೇಳಿದೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ನೇತೃತ್ವ ವಹಿಸಿ, ಆರ್ಥಿಕ ಸುಧಾರಣೆಗಳ ಹರಿಕಾರ ಎಂದು ಗುರುತಿಸಿಕೊಂಡಿರುವ ಸಿಂಗ್ ಅವರು ಗುರುವಾರ 92 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 2004 ರಿಂದ 2014ರ ವರೆಗೆ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಡಾ. ಮನಮೋಹನ್​ ಸಿಂಗ್​ ಅವರು ಗಣನೀಯ ಸೇವೆ ಸಲ್ಲಿಸಿದ್ದರು.

ಅಂತ್ಯಕ್ರಿಯೆಯನ್ನು ಪ್ರತ್ಯೇಕ ಸ್ಮಾರಕ ಸ್ಥಳದಲ್ಲಿ ನಡೆಸಬೇಕೆಂಬ ಕಾಂಗ್ರೆಸ್‌ನ ಮನವಿಯನ್ನು ಕೇಂದ್ರ ಸರ್ಕಾರ ಆರಂಭದಲ್ಲಿ ನಿರಾಕರಿಸಿತ್ತು. ಕೇಂದ್ರದ ನಿರ್ಧಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭಾರತದ ಮೊದಲ ಸಿಖ್ ಪ್ರಧಾನಿಗೆ ಉದ್ದೇಶಪೂರ್ವಕ ಅವಮಾನ” ಎಂದು ಟ್ವೀಟ್‌ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.

ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಅತಿ ಗಣ್ಯರಿಗೆ ಮೀಸಲಾದ ಸ್ಥಳದಲ್ಲಿ ಗೌರವ ಸಂಪ್ರದಾಯಗಳೊಂದಿಗೆ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಡೆಸುವಂತೆ ಮನವಿ ಮಾಡಿದರು. ಈ ಬೆಳವಣಿಗೆ ನಂತರ ತಡರಾತ್ರಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!