spot_img
Monday, March 16, 2026
spot_img

ದೇಶದ ಸರ್ವಶ್ರೇಷ್ಠ ಅರ್ಥಶಾಸ್ತ್ರಜ್ಞ, ಮಾಜಿ ಪಿಎಂ ಡಾ. ಸಿಂಗ್‌ ಪಂಚಭೂತಗಳಲ್ಲಿ ಲೀನ !

ಜನಪ್ರತಿನಿಧಿ (ನವ ದೆಹಲಿ) : ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ, ಸೇನಾ ಗೌರವಗಳೊಂದಿಗೆ ನೆರವೇರಿತು. ಈ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಾರಿ ತೋರಿದ್ದ ತಜ್ಞ ಸುದೀರ್ಘ ಅನುಭವ ಅಧ್ಯಾಯಕ್ಕೆ ಚುಕ್ಕಿ ಬಿದ್ದಿತು.

ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಿಖ್ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

ಮೊದಲಿಗೆ ಮೂರನೇ ಮೋತಿಲಾಲ್ ಮಾರ್ಗದಲ್ಲಿರುವ ಮನಮೋಹನ್ ಸಿಂಗ್ ಅವರ ನಿವಾಸದಿಂದ ಅವರ ಪಾರ್ಥೀವ ಶರೀರವನ್ನು ಬಿಗಿ ಭದ್ರತೆಯೊಂದಿಗೆ ಎಐಸಿಸಿ ಕಚೇರಿಗೆ ತರಲಾಯಿತು. ಕಾಂಗ್ರೆಸ್ ಮುಖಂಡರು ಅಂತಿಮ ದರ್ಶನ ಪಡೆದ ನಂತರ ಅಲ್ಲಿಂದ ನಿಗಮ್‌ಬೋಧೆಗೆ ಪಾರ್ಥಿವ ಶರೀರವನ್ನು ತರಲಾಯಿತು. ಅಲ್ಲಿ ಅಂತಿಮ ವಿಧಾನಗಳು ನಡೆದವು.

Former Prime Minister #DrManmohanSingh laid to rest with full state honours after leaders and family paid last respects at Nigam Bodh Ghat in Delhi.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕ‌ರ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೆಹಲಿ ಮುಖ್ಯಮಂತ್ರಿ ಅತಿಶಿ, ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ, ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್, ಸಮಾಜವಾದಿ ಪಕ್ಷದ ಸಂಸದ ಅವದೇಶ್ ಪ್ರಸಾದ್, ಭೂತಾನ್ ದೊರೆ ಜಿಗ್‌ ಖೇಸರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!