spot_img
Monday, March 16, 2026
spot_img

ಕೆಪಿಎಸ್‌ಸಿ : ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕದಿದ್ದಲ್ಲಿ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟ : ವಿಜಯೇಂದ್ರ ಎಚ್ಚರಿಕೆ

ಜನಪ್ರತಿನಿಧಿ (ಬೆಂಗಳೂರು) : ಕೆಪಿಎಸ್‌ಸಿ ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ. ಡಿಸೆಂಬರ್ 29 ರಂದು ನಡೆದ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ ಮಾಡಿದ್ದ ಕೆಪಿಎಸ್‌ಸಿ ಕನ್ನಡ ಭಾಷೆಯಲ್ಲಿರುವ ಯಾವುದೇ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಗೊಂದಲವಾದಲ್ಲಿ ಆಂಗ್ಲ ಭಾಷೆಯ ಪ್ರಶ್ನೆಗಳನ್ನು ನೋಡಿ ಅರ್ಥ ಮಾಡಿಕೊಳ್ಳಿ ಎಂದು ಅಭ್ಯರ್ಥಿಗಳಿಗೆ ಸೂಚಿಸುವ ಮೂಲಕ ತಮ್ಮ ಯಡವಟ್ಟುಗಳನ್ನು ಮಾಡಿಯೇ ಸಿದ್ಧ ಎಂಬ ಮುನ್ಸೂಚನೆ ನೀಡಿತ್ತು, ಇದೀಗ ಮತ್ತೆ ಭಾಷಾಂತರ ಲೋಪ ಹಾಗೂ ಕೆಲ ಜಿಲ್ಲೆಗಳಲ್ಲಿ ಒಎಂಆರ್ ಶೀಟ್ ಸಂಖ್ಯೆಗಳೇ ಅದಲು-ಬದಲಾಗಿರುವುದು ಪರೀಕ್ಷಾರ್ಥಿಗಳನ್ನು ಮತ್ತಷ್ಟು ಆತಂಕಕ್ಕೆ ತಳ್ಳಲ್ಪಟ್ಟಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ವಿಜಯೇಂದ್ರ, ಈ ಹಿಂದಿನ ಪರೀಕ್ಷೆಯಲ್ಲೂ ಕನ್ನಡ ಭಾಷಾ ಪರೀಕ್ಷಾರ್ಥಿಗಳಿಗೆ ಸಮರ್ಪಕವಾಗಿ ಭಾಷಾಂತರಿಸದೇ ಯಡವಟ್ಟು ಮಾಡಿ ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕರ್ನಾಟಕದ ಮಾತೃಭಾಷೆಯಲ್ಲಿಯೇ ಸೂಕ್ತ ಪ್ರಶ್ನೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿ ಪದೇ ಪದೇ ಕೆಎಎಸ್ ಪರೀಕ್ಷಾರ್ಥಿಗಳನ್ನು ಗೊಂದಲಕ್ಕೆ ದೂಡುತ್ತಿರುವ ಬೇಜವಾಬ್ದಾರಿತನ ಪದೇ ಪದೇ ಮರುಕಳಿಸುತ್ತಿರುವುದು ಕೆಪಿಎಸ್‌ಸಿ ವೈಫಲ್ಯ ಹಾಗೂ ರಾಜ್ಯ ಸರ್ಕಾರದ ಅಸಮರ್ಥ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ದೂಷಿಸಿದ್ದಾರೆ.

ಕಠಿಣ ಪರಿಶ್ರಮದಿಂದ ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಸಾವಿರಾರು ಉದ್ಯೋಗಾಕಾಂಕ್ಷಿಗಳ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಅಲ್ಲದೇ ಕೆಪಿಎಸ್ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದವರು ಎಚ್ಚರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!