spot_img
Monday, March 16, 2026
spot_img

ಹಾಲಿನ ಬಾಕಿ ₹622.54 ಕೋಟಿ : ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕಿರುವ ಅಸಡ್ಡೆತನವನ್ನು ಸಾಕ್ಷೀಕರಿಸುತ್ತಿದೆ : ವಿಜಯೇಂದ್ರ

ಜನಪ್ರತಿನಿಧಿ (ಬೆಂಗಳೂರು) : ಕಳೆದ ಜೂನ್‌ ತಿಂಗಳಿಂದಲೂ ನಾಡಿನ ರೈತರ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರೋಬ್ಬರಿ ₹622.54 ಕೋಟಿ ಬಾಕಿ ಹಣವನ್ನು ಬಾಕಿ ಉಳಿಸಿಕೊಂಡಿರುವುದು ರೈತರ ಬಗೆಗೆ ಈ ಸರ್ಕಾರಕ್ಕಿರುವ ಅಸಡ್ಡೆತನವನ್ನು ಸಾಕ್ಷೀಕರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿರುವ ವಿಜಯೇಂದ್ರ ಯಡಿಯೂರಪ್ಪ, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗಿ ಜನ ಸಾಮಾನ್ಯರ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಸದಾ ಸಜ್ಜಾಗಿರುವ ಸರ್ಕಾರ ಅನ್ನದಾತರ ಬಾಕಿ ಪಾವತಿಗೆ ಮನಸ್ಸು ಮಾಡುತ್ತಿಲ್ಲ. ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕನ್ನೂ ಹಸನಾಗಿಸುತ್ತಿಲ್ಲ ಎಂದಿದ್ದಾರೆ.

ಅಭಿವೃದ್ಧಿ ಶೂನ್ಯ ಆಡಳಿತದ ಮೂಲಕ ರೈತರ ಶ್ರೇಯೋಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡದ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ. ಹಾಲು ಉತ್ಪಾದನೆಯನ್ನೇ ಉಪಕಸುಬನ್ನಾಗಿಸಿಕೊಂಡು ಜೀನವ ನಡೆಸುತ್ತಿರುವ ಲಕ್ಷಾಂತರ ರೈತರ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!