spot_img
Monday, March 16, 2026
spot_img

ಸೇನಾ ವಾಹನ ಕಂದಕಕ್ಕೆ ಉರುಳಿದ ಪ್ರಕರಣ : ಚಿಕಿತ್ಸೆಯಲ್ಲಿದ್ದ ಕೊಡಗಿನ ಯೋಧ ದಿವಿನ್‌ ಸಾವು !

ಜನಪ್ರತಿನಿಧಿ (ಕೊಡಗು) : ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದು ನಾಲ್ವರು ಯೋಧರು ಹುತಾತ್ಮರಾಗಿದ್ದರು.

ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿವಿನ್ ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೇನಾಧಿಕಾರಿಗಳ ತುರ್ತು ಕರೆ ಹಿನ್ನೆಲೆ ಯೋಧನ ತಾಯಿ ಜಯ ಅವರು ಶ್ರೀನಗರಕ್ಕೆ ತೆರಳಿದ್ದರು. ಇದೀಗ ಅವರು ಹುತಾತ್ಮರಾಗಿರುವ ಸುದ್ದಿ ವರದಿಯಾಗಿದೆ.

ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ಯೋಧ ದಿವಿನ್, ತಂದೆ ತಾಯಿಗೆ ಏಕೈಕ ಮಗನಾಗಿದ್ದು, 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆಯಲ್ಲಿ ಭಾನುವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ದಿವಿನ್ ಅವರಿಗೆ ಇತ್ತೀಚಿಗೆ ಕೊಡಗು ಮೂಲದ ಯುವತಿ ಜೊತೆ ಮದುವೆಗೆ ದಿನಾಂಕ ಕೂಡ ನಿಗದಿಯಾಗಿತ್ತು ಎನ್ನಲಾಗಿದೆ.

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾಗಿ ಕರ್ನಾಟಕದ ಮೂವರು ಯೋಧರು ಸೇರಿ ಮರಾಠಾ ರೆಜಮೇಂಟನ ಒಬ್ಬರು ಸೇರಿ ಒಟ್ಟು ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಹಲವು ಯೋಧರು ಗಾಯಗೊಂಡಿದ್ದರು.

ಭೀಕರ ದುರಂತದಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು ಐವರು ಹುತಾತ್ಮರಾಗಿದ್ದರು. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರದ ಬಿಜಾಡಿಯ ಅನೂಪ್ ಪೂಜಾರಿ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದರು. ಈ ದುರಂತದಲ್ಲಿ ಗಾಯಗೊಂಡಿದ್ದ ದಿವಿನ್ ಭಾನುವಾರ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!