spot_img
Monday, March 16, 2026
spot_img

ಮುಷ್ಕರ ಕೈಬಿಟ್ಟ ಸಾರಿಗೆ ನೌಕರರು : ಸಂಕ್ರಾಂತಿ ಬಳಿಕ ಬೇಡಿಕೆ ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಅಭಯ

ಜನಪ್ರತಿನಿಧಿ (ಬೆಂಗಳೂರು) : ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ನಮ್ಮ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿರುವುದಾಗಿ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ನಮ್ಮ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಲಾಗಿದೆ ಎಂದರು.

ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ನಮ್ಮ ಸರ್ಕಾರ ಮುಕ್ತವಾಗಿದೆ ಎಂದವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!