spot_img
Saturday, February 14, 2026
spot_img

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗೆಲ್ಲ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ : ಆರ್‌. ಅಶೋಕ್‌ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ ಅಶೋಕ್‌ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

2013-18

  • ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ
  • ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ
  • ಕಲ್ಬುರ್ಗಿಯ ದಕ್ಷ ಪೊಲೀಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ
  • ಅನ್ನಭಾಗ್ಯ ಹಗರಣದ ಸಾಕ್ಷ್ಯ ಸಂಗ್ರಹಿಸಿದ್ದ ಐ.ಎ.ಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು.
  • ಹೂವಿನ ಹಡಗಲಿಯ ಡಿ.ವೈ.ಎಸ್.ಪಿ ಯಾಗಿದ್ದ ಅನುಪಮಾ ಶೆಣೈಗೆ ಕಿರುಕುಳ, ನೌಕರಿಗೆ ರಾಜೀನಾಮೆ
  • ಮೈಸೂರಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಿಎಂ ಆಪ್ತರಿಂದ ಕಿರುಕುಳ
  • ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ
    ಮಹಾನಿರ್ದೇಶಕಿಯಾಗಿದ್ದ ರಶ್ಮಿಯವರ ಮೇಲೆ ಹಾಡುಹಗಲೇ ಮಾರಣಾಂತಿಕ ಹಲ್ಲೆ

2023-

  • ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ
  • ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ
  • ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು.
  • ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮದ ನಿವಾಸಿ ಸಿವಿಲ್‌ ಎಂಜಿನಿಯರ್‌ ಸಚಿನ್‌ ಮಾನಪ್ಪ ಪಾಂಚಾಳ್‌ (26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ @PriyankKharge ಅವರ ಆಪ್ತ, ಕಲಬುರಗಿ ಕಾಂಗ್ರೆಸ್‌ ಮುಖಂಡ ರಾಜು ಕಪನೂರ ಸೇರಿ ಎಂಟು ಮಂದಿ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣು ಎಂದು ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ಎಕ್ಸ್‌ ನ ಮೂಲಕ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!