spot_img
Sunday, February 15, 2026
spot_img

ನಾನು ಬಿಜೆಪಿ, ಆರ್‌ಎಸ್‌ಎಸ್‌, ಮನುಸ್ಮೃತಿಯ ವಿರುದ್ಧವಾಗಿದ್ದೇನೆ, ಅದಕ್ಕೆ ನನ್ನ ಮೇಲೆ ಟಾರ್ಗೇಟ್‌ : ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು(ಮಂಗಳವಾರ) ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪ್ರಿಯಾಂಕ್‌ ಖರ್ಗೆ, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದವರು ಹೇಳಿದ್ದಾರೆ.

‘ಬಿಜೆಪಿ ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆ ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ-ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದ್ದು, ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ’ ಎಂದು ದೂರಿದ್ದಾರೆ.

‘ಬಿಜೆಪಿಯವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಯಾಕೆಂದರೆ, ನಾನು ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದ್ದೇನೆ. ನಾನು ಆರ್‌ಎಸ್‌ಎಸ್ ಮತ್ತು ಮನುಸ್ಮೃತಿಯ ವಿರುದ್ಧ ಇದ್ದೇನೆ ಮತ್ತು ನಾನು ಅದರ ಬಗ್ಗೆ ದನಿಯೆತ್ತಿದ್ದೇನೆ. ಅಲ್ಲದೆ, ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಮತ್ತು ಸಂವಿಧಾನವನ್ನು ಅನುಸರಿಸುತ್ತೇವೆ. ಆದ್ದರಿಂದ ಅವರು ಸಹಜವಾಗಿ ಇಂತಹ ವಿಚಾರಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಾರೆ. ಸಂತ್ರಸ್ತರಲ್ಲಿ ಯಾರಿಗಾದರೂ ನ್ಯಾಯ ದೊರಕಿಸಿಕೊಡಲು ಬಿಜೆಪಿಗೆ ನಿಜವಾಗಿಯೂ ಆಸಕ್ತಿ ಇದ್ದರೆ, ಮೊದಲು ವಿಜಯೇಂದ್ರ ತನ್ನ ತಂದೆಯ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ತಾವು ರಾಜೀನಾಮೆ ನೀಡಲಿ’ ಎಂದು ಸವಾಲೆಸಿದಿದ್ದಾರೆ.

ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ ನಂತರ ಸಚಿವರು ತಿರುಗೇಟು ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಾಪನೂರ ಅವರ ಕಿರುಕುಳ ಮತ್ತು ಬೆದರಿಕೆಯಿಂದ ಬೀದರ್‌ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಈ ಬಗ್ಗೆ ಡೆತ್‌ನೋಟ್‌ನಲ್ಲಿ ವಿಸ್ತೃತವಾಗಿ ಹೇಳಿದ್ದಾರೆ ಎಂದು ವಿಜಯೇಂದ್ರ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!