spot_img
Sunday, April 5, 2026
spot_img

ಕುಂದಾಪುರ ಬ್ಲಾಕ್ ಕಾಂಗ್ರೆಸ್: ಅಗಲಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ

ಕುಂದಾಪುರ: ಅಗಲಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರಿಗೆ ಡಿ.30ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಗ್ಯಾರಂಟಿ ಸಮಿತಿಗಳ ಉಪಾಧ್ಯಕ್ಷರಾದ ದಿನೇಶ್ ಹೆಗ್ಡೆಯವರು, ಮನಮೋಹನ್ ಸಿಂಗ್ ಆಡಳಿತದಲ್ಲಿ ಜಾರಿಗೆ ತಂದ ಮಾಹಿತಿ ತಂತ್ರಜ್ಞಾನ,ಆಹಾರ ಭದ್ರತೆ, ಶಿಕ್ಷಣ ಮತ್ತು ಉದ್ಯೋಗ ಖಾತ್ರಿ ಯೋಜನೆಯಂತಹ ಜನಪ್ರಿಯ ಯೋಜನೆಗಳನ್ನು ಕಾನೂನಿನ ಮೂಲಕ ದೇಶದ ಜನತೆಗೆ ಶಾಶ್ವತವಾಗಿ ದೊರಕುವಂತೆ ಮಾಡಿದರು.ವಿಶ್ವವೇ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ ಸಂದರ್ಭದಲ್ಲಿ ದೇಶದ ಆರ್ಥಿಕತೆಯನ್ನು ಸಮರ್ಥವಾಗಿ ನಿಭಾಯಿಸಿದರು ಎಂದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಮನಮೋಹನ್ ಸಿಂಗ್ ಗ್ಲೋಬಲ್ ಲೀಡರ್ ಆಗಿದ್ದು, ಪ್ರಧಾನಿ ಸ್ಥಾನಕ್ಕೆ ಘನತೆಯನ್ನು ತಂದವರು ಆಗಿದ್ದರು ಎಂದರು. ತನ್ನ ಆಡಳಿತದ ಅವಧಿಯಲ್ಲಿ ಎಂದೂ ಪ್ರಚಾರದ ಚಪಲತೆಗೆ ಬುಲ್ಡೋಜರ್ ಅಥವಾ ತನ್ನೆದೆಯ ಇಷ್ಟಗಲ ಎನ್ನುವ ಸಣ್ಣತನವನ್ನು ತೋರಿಸಿರಲಿಲ್ಲ ಎಂದರು. ಪಿ‌ಎಲ್‌ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ನುಡಿನಮನ ಸಲ್ಲಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಬ್ಲಾಕ್ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ, ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿ, ಮಹಮದ್ ಅಶ್ರಫ್, ಪಂಚಾಯತ್ ಸದಸ್ಯರಾದ ವಿಜಯಧರ್ ಕೆವಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಮುನಾಫ್ ಕೊಡಿ, ಐಟಿ ಸೆಲ್ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ,ಜಿಲ್ಲಾ ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಶನ್ ಶೆಟ್ಟಿ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ನಾರಾಯಣ ಆಚಾರ್, ವಿ ಗಣೇಶ್, ಅಭಿಜಿತ್ ಪೂಜಾರಿ, ಆಶಾ ಕರ್ವಾಲ್ಲೊ, ಕುಂದೇಶ್ವರ ಆಡಳಿತ ಸಮಿತಿಯ ಸದಸ್ಯರಾದ ನಾಗರಾಜ್ ನಾಯಕ್, ಸೀಮಾ ಚಂದ್ರ ಪೂಜಾರಿ, ವಿಠಲ್ ಕಾಂಚನ್, ನಗರ ಯೋಚನಾ ಪ್ರಾಧಿಕಾರದ ಸದಸ್ಯರಾದ ಅಲ್ಪಾಜ್, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಸುವರ್ಣ, ಶಶಿರಾಜ್ ಪೂಜಾರಿ, ವೇಲಾ ಬ್ರಗಾಂಜ, ಶಶಿಧರ ಕೋಟೆ, ಜೊಯ್ ರೆಬೆಲ್ಲೊ, ಸದಾನಂದ ಖಾರ್ವಿ, ಕೆಪಿ ಅರುಣ್ ಪಟೇಲ್, ಮೇಬಲ್ ಡಿಸೋಜಾ, ವಿವೇಕಾನಂದ, ಎಡಾಲ್ಫ್ ಡಿಕೋಸ್ಟ, ಸಂಗೀತ, ಬೇಳೂರು ಪ್ರಭಾವತಿ ಶೆಟ್ಟಿ, ಜೂಲಿಯೆಟ್ ಪಾಯ್ಸ್ ಇನ್ನಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!