spot_img
Wednesday, April 1, 2026
spot_img

ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಯಂತಿ ಖಾರ್ವಿ, ಉಪಾಧ್ಯಕ್ಷರಾಗಿ ತಬ್ರೇಜ್ ಆಯ್ಕೆ

ಗಂಗೊಳ್ಳಿ, ಜ.1: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದು, ಗ್ರಾಮ ಪಂಚಾಯತಿಯ ಮೊದಲ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ ಖಾರ್ವಿ ಮತ್ತು ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐ ಬೆಂಬಲಿತ ಸದಸ್ಯ ತಬ್ರೇಜ್ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ (ಮಹಿಳೆ)ಕ್ಕೆ ಮೀಸಲಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಗಂಗೊಳ್ಳಿ-6 ಕ್ಷೇತ್ರದಿಂದ ಗೆದ್ದ ಕಾಂಗ್ರೆಸ್ ಬೆಂಬಲಿತ ಜಯಂತಿ ಖಾರ್ವಿ ಮತ್ತು ಗಂಗೊಳ್ಳಿ-1 ಕ್ಷೇತ್ರದಿಂದ ಗೆದ್ದ ಬಿಜೆಪಿ ಬೆಂಬಲಿತ ರೇಖಾ ಖಾರ್ವಿ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಗಂಗೊಳ್ಳಿ-2 ಕ್ಷೇತ್ರದಿಂದ ಗೆದ್ದ ಎಸ್.ಡಿ.ಪಿ.ಐ ಬೆಂಬಲಿತ ತಬ್ರೇಜ್ ಮತ್ತು ಗಂಗೊಳ್ಳಿ-1 ಕ್ಷೇತ್ರದಿಂದ ಗೆದ್ದ ಬಿಜೆಪಿ ಬೆಂಬಲಿತ ನಾಗರಾಜ ಖಾರ್ವಿ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಂತಿ ಖಾರ್ವಿ 19 ಮತಗಳನ್ನು ಪಡೆದರೆ ರೇಖಾ ಖಾರ್ವಿ 13 ಮತಗಳನ್ನು ಪಡೆದರು. ಒಂದು ಮತ ಅಸಿಂಧುವಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತಬ್ರೇಜ್ 18 ಮತಗಳನ್ನು ಮತ್ತು ನಾಗರಾಜ ಖಾರ್ವಿ 15 ಮತಗಳನ್ನು ಪಡೆದುಕೊಂಡರು. ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸಿ ಗೆದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದರು.

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯ ರಿಯಾಜ್ ಅಹಮ್ಮದ್ ಎಂಬುವರು ಅಂಬುಲೆನ್ಸ್‍ನಲ್ಲಿ ಬಂದು ಮತ ಚಲಾಯಿಸಿದರು.

ಕುಂದಾಪುರ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಅವರು ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಿಡಿಒ ಉಮಾಶಂಕರ, ಗ್ರಾಮ ಪಂಚಾಯತ್‍ನ ನಾರಾಯಣ ಶ್ಯಾನುಭಾಗ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

33 ಸದಸ್ಯ ಬಲದ ಗಂಗೊಳ್ಳಿ ಗ್ರಾಮ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತರು 12 ಸ್ಥಾನಗಳಲ್ಲಿ, ಎಸ್‍ಡಿಪಿಐ ಬೆಂಬಲಿತರು 7 ಸ್ಥಾನಗಳಲ್ಲಿ, ಬಿಜೆಪಿ ಬೆಂಬಲಿತರು 12 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಚುನಾವಣಾ ಪೂರ್ವದಲ್ಲಿ ಎಸ್‍ಡಿಪಿಐ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ನಿರೀಕ್ಷೆಯಂತೆ ಉಪಾಧ್ಯಕ್ಷ ಸ್ಥಾನವನ್ನು ಎಸ್‍ಡಿಪಿಐಗೆ ಬಿಟ್ಟು ಕೊಟ್ಟಿತು.

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯ ರಿಯಾಜ್ ಅಹಮ್ಮದ್ ಎಂಬುವರು ಅಂಬುಲೆನ್ಸ್‌ನಲ್ಲಿ ಬಂದು ಮತ ಚಲಾಯಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!