spot_img
Wednesday, April 1, 2026
spot_img

ಮರವಂತೆ ಮಹಾರಾಜ ಸ್ವಾಮಿ ದೇವಸ್ಥಾನದಲ್ಲಿ ಬೆಳ್ಳಿ ರಥೋತ್ಸವ

ಮರವಂತೆ: ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬೆಳ್ಳಿ ರಥೋತ್ಸವ ಬುಧವಾರ ನಡೆಯಿತು.

ಪ್ರತಿ ವರ್ಷದಂತೆ ಮರವಂತೆ ಭಾಗದ ಮೀನುಗಾರರು ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಿದರು. ಬಳಿಕ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರ ಬೆಳ್ಳಿ ರಥೋತ್ಸವ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮೀನುಗಾರಿಕಾ ಋತುವಿನಲ್ಲಿ ಸಮೃದ್ಧ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಯಾವುದೇ ಅಪಾಯ ಎದುರಾಗದಿರಲಿ, ಪ್ರಕೃತಿ ವಿಕೋಪಗಳು ಬಾರದಿರಲಿ, ಎಲ್ಲಾ ಮೀನುಗಾರರ ಬಾಳಿನಲ್ಲಿ ಸುಖ ಶಾಂತಿ ನೆಮ್ಮದಿ ಇರುವಂತಾಗಲಿ, ಸಮಸ್ತ ಮೀನುಗಾರರಿಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಕಾರ್ಯದರ್ಶಿ ಶೇಖರ ಖಾರ್ವಿ, ಮಾಜಿ ಅಧ್ಯಕ್ಷ ವಾಸುದೇವ ಖಾರ್ವಿ, ಶ್ರೀರಾಮ ಕರಾವಳಿ ಸಹಕಾರಿ ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ, ಸಮಿತಿ ಪದಾಧಿಕಾರಿಗಳು, ಮೀನುಗಾರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!