spot_img
Thursday, April 2, 2026
spot_img

ಸಕಲ ಸರ್ಕಾರಿ, ಸೇನಾ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಕೊಡಗಿನ ಯೋಧ ದಿವಿನ್‌ ಅಂತ್ಯಕ್ರಿಯೆ !

ಜನಪ್ರತಿನಿಧಿ (ಕೊಡಗು) : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಎಂಬಲ್ಲಿ ಇತ್ತೀಚೆಗೆ ಘಟಿಸಿದ್ದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದ ವೀರಯೋಧ ದಿವಿನ್‌ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶನಿವಾರಸಂತೆ ಬಳಿಯ ಆಲೂರು ಸಿದ್ದಾಪುರದ ಮಾಲಂಬಿ ಗ್ರಾಮದಲ್ಲಿ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ನಡೆಯಿತು.

ಇದಕ್ಕೂ ಮೊದಲು ಕುಶಾಲನಗರದಿಂದ ಅವರ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ್ಕೆ ಸ್ವಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ನೂರಾರು ಮಂದಿ ಮೃತ ಯೋಧನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಶಾಲಾ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು ಪುಷ್ಪ ನಮನ ಸಲ್ಲಿಸಿ ಕಂಬನಿ ಮಿಡಿದರು.

ಆಲೂರು ಸಿದ್ದಾಪುರದ ಶಾಲಾ ಮೈದಾನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಮಂದಿ ಹುತಾತ್ಮ ಯೋಧ ದಿವಿನ್‌ ಅವರ ಅಂತಿಮ ದರ್ಶನ ಪಡೆದರು. ಬಳಿಕ ಮಾಲಂಬಿಯಲ್ಲಿರುವ ಅವರ ಮನೆಯಲ್ಲಿ ದಿವಿನ್‌ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು.

ನಂತರ ಅವರ ತೋಟದಲ್ಲಿ ಅವರ ಸಂಬಂಧಿ ಚಿರಾಗ್‌ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!