spot_img
Thursday, April 2, 2026
spot_img

ಬಿಜೆಪಿಗರು ಗೊಬೆಲ್ಸ್ ಕೂಡ ನಾಚುವಂತ ಸುಳ್ಳುಗಾರರಾಗಿ ಹೊರಹೊಮ್ಮಲಿದ್ದಾರೆ! | #BJPToolkit ಸೊಗಸಾಗಿದೆ | ಬಿಜೆಪಿ ವಾಟ್ಸ್ಯಾಪ್‌ ಚಾಟ್‌ ಹಂಚಿಕೊಂಡ ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : ಹಿಂದೆ ಬಿಜೆಪಿ vs ಕೆಜೆಪಿ ಬಡಿದಾಟವಿತ್ತು, ಈಗ ಬಿಜೆಪಿಯಲ್ಲಿ VJP vs YJP vs AJP ಬಡಿದಾಟ ನಡೆಯುತ್ತಿದೆ, ಈ ಬಡಿದಾಟವನ್ನು ಮರೆಮಾಚಲು ಹೋರಾಟ ಎಂಬ ನಾಟಕ ಶುರು ಮಾಡಿಕೊಂಡಿದೆ. ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ, ಕಾಫಿ, ಟಿ, ಬಿಸ್ಕೆಟ್ ಗಳ ಆತಿಥ್ಯವನ್ನೂ ನೀಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ವಾಟ್ಸ್ಯಾಪ್‌ ಚಾಟ್‌ ನ ಸ್ಕ್ರೀನ್‌ ಶಾಟ್‌ ಗಳನ್ನು ತಮ್ಮ ಮೈಕ್ರೋಬ್ಲಾಗಿಂಗ್‌ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್‌ ಖರ್ಗೆ, ಬಿಜೆಪಿಗೆ ಅಸ್ತಿತ್ವ ಉಳಿಸಿಕೊಳ್ಳಲು ಈಗ ನನ್ನ ಹೆಸರು ಅನಿವಾರ್ಯವಾಗಿದೆ, ಹಾಗಾಗಿ ನನ್ನ ವಿರುದ್ಧದ ಪಿತೂರಿಯ “ಟೂಲ್ ಕಿಟ್“ ರೂಪಿಸಿದೆ. ರಾಜ್ಯ ಬಿಜೆಪಿ ನಾಯಕರು ಹೈಕಮಾಂಡಿಗೆ ತಮ್ಮ ಸಾಧನೆಯ ರಿಪೋರ್ಟ್ ಕಾರ್ಡ್ ತೋರಿಸಲು ನನ್ನ ಹೆಸರಿನಲ್ಲಿ ಹೋರಾಟದ ನಾಟಕ ಆರಂಭಿಸಿದ್ದಾರೆ, ನನ್ನ ಹೆಸರಿನ ಮೂಲಕ ವಿಜಯೇಂದ್ರರವರು “ಸಂಕ್ರಾಂತಿಯ ಡೆಡ್ ಲೈನ್” ದಾಟುವ ಪ್ರಯತ್ನ ನಡೆಸಿದ್ದಾರೆ! ಎಂದಿದ್ದಾರೆ.

Dear ಬಿಜೆಪಿ, ಸುಳ್ಳುಗಳ ಆಧಾರದಲ್ಲಿ ನನ್ನ ವಿರುದ್ಧ ಇಷ್ಟೆಲ್ಲಾ ಸುವ್ಯವಸ್ಥಿತವಾದ, ವಿವಿಧ ಮಾದರಿಯ ಹಾಗೂ ವ್ಯಾಪಕವಾದ ಹೋರಾಟ ಮಾಡುವ ಬದಲು ರಾಜ್ಯದ ಜನರೆದುರು ನಿಮ್ಮ “ನೈತಿಕತೆ“ಯನ್ನು ನಿರೂಪಿಸುವ ಹೋರಾಟ ಮಾಡಿ ಎಂದು ಹೇಳಿದ್ದು ಮಾತ್ರವಲ್ಲದೆ, ಮಹಿಳೆಯರನ್ನು ಅತ್ಯಾಚಾರಗೈದು, ದಲಿತರನ್ನು ನಿಂದಿಸಿ, ಒಕ್ಕಲಿಗ ಮಹಿಳೆಯರನ್ನು ಮಂಚಕ್ಕೆ ಕರೆದ ಮುನಿರತ್ನರವರ ವಿರುದ್ಧ ಹೋರಾಟ ಮಾಡಿ, ಜನ ಮೆಚ್ಚುತ್ತಾರೆ. ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಪೊಕ್ಸೋ ಪ್ರಕರಣ ಎದುರಿಸುತ್ತಿರುವ ಯಡಿಯೂರಪ್ಪನವರ ವಿರುದ್ಧ ಕರಪತ್ರ ಹಂಚಿ, ಜನ ಒಪ್ಪುತ್ತಾರೆ. ಮಹಿಳೆಯರನ್ನು ಅತ್ಯಂತ ಕೊಳಕು ಭಾಷೆಯಲ್ಲಿ ನಿಂದಿಸಿದ ಸಿ.ಟಿ ರವಿಯವರ ಮನೆಗೆ ಮುತ್ತಿಗೆ ಹಾಕಿ, ಜನ ಜೈ ಅನ್ನುತ್ತಾರೆ. ಕೋವಿಡ್ ಕಾಲದಲ್ಲಿ ಹೆಣದ ಮೇಲೆ ಹಣ ಮಾಡಿ, ಭ್ರಷ್ಟಾಚಾರದಿಂದ ಸಾವಿರಾರು ಜೀವ ತೆಗೆದ ಭ್ರಷ್ಟರ ವಿರುದ್ಧ ಕಪ್ಪು ಬಾವುಟ ತೋರಿಸಿ, ಜನ ಸಮಾಧಾನವಾಗುತ್ತಾರೆ. ವಕ್ಫ್ ವರದಿ ಮುಚ್ಚಿ ಹಾಕಲು 150 ಕೋಟಿ ಆಮಿಷ ಒಡ್ಡಿದ ವಿಜಯೇಂದ್ರರವರ ವಿರುದ್ಧ ಪೋಸ್ಟರ್ ಪ್ರದರ್ಶನ ಮಾಡಿ, ಜನ ಬಹುಪರಾಕ್ ಹಾಕುತ್ತಾರೆ ಎಂದು ಹೇಳಿದ್ದಾರೆ.

ಈ ಎಲ್ಲಾ ಕೆಲಸಗಳನ್ನು ಮಾಡಿ ಎಂದು ರಾಜ್ಯ ಬಿಜೆಪಿಗೆ ಹೇಳಿದ ಪ್ರಿಯಾಂಕ್‌, ರಾಜ್ಯದ ಜನಕ್ಕೆ ನೀವು ಎಸಗಿದ ದ್ರೋಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ, ನಿಮಗೂ “ನೈತಿಕತೆ” ಪದದ ಅರ್ಥ ತಿಳಿದಿದೆ ಎಂಬುದನ್ನು ನಿರೂಪಿಸಿ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೊಬೆಲ್ಸ್ ಸಿದ್ದಾಂತವನ್ನು ಮೆಚ್ಚಿ ನೆಚ್ಚಿಕೊಂಡಿರುವ ಬಿಜೆಪಿಗರು ಮುಂದಿನ ದಿನಗಳಲ್ಲಿ ಗೊಬೆಲ್ಸ್ ಕೂಡ ನಾಚುವಂತ ಸುಳ್ಳುಗಾರರಾಗಿ ಹೊರಹೊಮ್ಮಲಿದ್ದಾರೆ! ಎಂದು ವ್ಯಂಗ್ಯವಾಡಿದ್ದಲ್ಲದೇ, ಅಂದಹಾಗೆ, ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಈ #BJPToolkit ತುಂಬಾ ಸೊಗಸಾಗಿದೆ! ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!