spot_img
Tuesday, March 17, 2026
spot_img

ಡಾ. ಸಿಂಗ್‌ ಹೆಸರಿನ ಸ್ಮಾರಕ ನಿರ್ಮಾಣಕ್ಕೆ ಭೂಮಿ ಅಂತಿಮಗೊಳಿಸುವ ಪ್ರಕ್ರಿಯೆ ಆರಂಭಿಸಿದ ಕೇಂದ್ರ ಸರ್ಕಾರ

ಜನಪ್ರತಿನಿಧಿ (ನವ ದೆಹಲಿ) : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ ಎಂದು ತಿಳಿದು ಬಂದಿದೆ. ಸ್ಥಳ ಅಂತಿಮಗೊಳಿಸುವುದಕ್ಕಾಗಿ ಸಿಂಗ್‌ ಅವರ ಕುಟುಂಬದ ಸದಸ್ಯರ ಜೊತೆಗೂ ಸರ್ಕಾರ ಸಂಪರ್ಕದಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಮಾರಕ ನಿರ್ಮಾಣ ಮಾಡಲು ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಂಜಯ್‌ ಗಾಂಧಿ ಸ್ಮಾರಕದ ಆಸುಪಾಸು ಇರುವ ಭೂಮಿಯನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಕೆಲವೊಂದು ಸ್ಥಳಗಳನ್ನು ಗುರುತಿಸಿದ್ದಾರೆಂದು ಕೇಂದ್ರ ಲೋಕೋಪಯೋಗಿ ಇಲಾಖೆಯ ಮೂಲಗಳು ತಿಳಿಸಿವೆ.

ಸದ್ಯ, ಮೂರು-ನಾಲ್ಕು ಆಯ್ಕೆಗಳಿದ್ದು, ಕುಟುಂಬದ ಜೊತೆ ಚರ್ಚೆ ನಡೆಸಲಾಗಿದೆ. ಯಾವುದೇ ಸ್ಥಳವನ್ನು ಈವರೆಗೆ ಅಂತಿಮಗೊಳಿಸಿಲ್ಲ. ನಿಗದಿತ ಭೂಮಿ ಹಂಚಿಕೆಗೂ ಮೊದಲು ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರ ಟ್ರಸ್ಟ್‌ ರಚಿಸಲಿದೆ ಎಂದು ಮೂಲಗಳು ತಿಳಿಸಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!