spot_img
Thursday, April 2, 2026
spot_img

ಉಡುಪಿ : ಫೆಬ್ರವರಿಯಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜನೆ : ಜಿಲ್ಲಾಧಿಕಾರಿ ಮಾಹಿತಿ

ಜನಪ್ರತಿನಿಧಿ (ಉಡುಪಿ) : ಯುವ ಜನತೆಗೆ ಉದ್ಯೋಗ ಅವಕಾಶ ನೀಡುವಂತಹ ಸದುದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಫೆಬ್ರವರಿಯ ಮೊದಲ ವಾರದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರ.

ಉದ್ಯೋಗ ಮೇಳ ನಗರದ ಡಾ. ಜಿ ಶಂಕರ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿದೆ. ಈ ಮೇಳದಲ್ಲಿ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪೆನಿಗಳ ನೂರಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಲಿದ್ದು, ಮೂರುವರೆ ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಲ್ಲದೇ, ಉದ್ಯೋಗ ಮೇಳಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಈಗಾಗಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಹೆಸರು ನೋಂದಣಿಗೆ ವೆಬ್‌ ಸೈಟ್‌ ಅನ್ನು ಶೀಘ್ರದಲ್ಲಿ ರಚಿಸಬೇಕು ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹಾಗೂ ವೃತ್ತಿಪರ ವಿದ್ಯಾಸಂಸ್ಥೆಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹಳೆ ವಿದ್ಯಾರ್ಥಿಗಳಿಗೂ ಸಹ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಒದಗಿಸುವಂತೆ ಆಗಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್‌, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್‌ ಕುಂದರ್‌, ಟ್ರೈನಿಂಗ್‌ ಇನ್ಸ್ಟಿಟ್ಯೂಟ್‌ ನ ಮುಖ್ಯಸ್ಥರು, ವಿವಿಧ ಕಾಲೇಜುಗಳ ಪ್ರತಿನಿಧಿಗಳು, ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!