spot_img
Sunday, February 15, 2026
spot_img

ಕುಂದಾಪುರ: ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ

ಜನಪ್ರತಿನಿಧಿ ವಾರ್ತೆ (ಕುಂದಾಪುರ) ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ, ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರು ಆಯೋಜಿಸಿರುವ ಕಿಶೋರ ಯಕ್ಷಗಾನ ಸಂಭ್ರಮ-೨2024  ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿ, ಮಕ್ಕಳಿಗೆ ಸಂಸ್ಕಾರ ಕಲಾ ಆಸಕ್ತಿ ತುಂಬಿರುವ ದೃಷ್ಟಿಯಿಂದ ಕಿಶೋರ ಯಕ್ಷಗಾನ ಸಂಭ್ರಮ ಕನ್ನಡದ ಭಾಷೆಯ ಉಳಿವಿಗೆ ಮಹತ್ವದ ಪಾತ್ರ ವಹಿಸುತ್ತದೆ. ಯಕ್ಷಗಾನಕ್ಕೆ ಮಕ್ಕಳನ್ನು ಯಾಕೆ ಕಳುಹಿಸುತ್ತಾರೆ ಎಂದರೆ ಯಕ್ಷಗಾನ ಮೌಲ್ಯವನ್ನು ಮಕ್ಕಳಿಗೆ ನೀಡುತ್ತದೆ. ಸಾತ್ವಿಕತೆಯ ಪ್ರಭಾವ ಒದಗಿಸುತ್ತದೆ. ಆದರ್ಶವನ್ನು ಕಲಿಸುತ್ತದೆ. ಯಕ್ಷಗಾನ ಪಾತ್ರಗಳು ಸಾತ್ವಿಕ ಪ್ರಜೆಗಳನ್ನು ರೂಪಿಸುತ್ತವೆ ಎಂದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ೨೨ ಪ್ರೌಢಶಾಲಾ ವಿಭಾಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು ಕರಾವಳಿಯ ಕಲೆಯಾದ ಯಕ್ಷಗಾನದಲ್ಲಿ ಕುಣಿತ, ಹಾಡುಗಾರಿಕೆ, ಸಂಭಾಷಣೆ ಮತ್ತು ತಾಳ ವಾದ್ಯಗಳಿಂದ ಎಲ್ಲ ರೀತಿಯ ದೈಹಿಕ ಹಾಗೂ ಮಾನಸಿಕವಾಗಿ ಮನರಂಜನೆಯೊಂದಿಗೆ ಬೌದ್ಧಿಕ ವಿಕಸನವಾಗಿ ಮಕ್ಕಳಿಗೆ ನೈತಿಕ ಶಿಕ್ಷಣಕ್ಕೆ ಸಹಕಾರಿಯಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ಚಂದ್ರ.ಕೆ, ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಕುಂದಾಪುರ ಆದರ್ಶ ಆಸ್ಪತ್ರೆಯ ಮಾಲಕರಾದ ಡಾ. ಆದರ್ಶ ಹೆಬ್ಬಾರ್, ಕಾವ್ರ್ರಾಡಿ ಸಿ.ಎ.ಬ್ಯಾಂಕ್ ಅಧ್ಯಕ್ಷ ಸದಾನಂದ ಬಳ್ಕೂರು, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ, ಯಕ್ಷ ಯಕ್ಷಗಾನ ಟ್ರಸ್ಟ್ ಉಡುಪಿ ಕಾರ್ಯದರ್ಶಿ ಮುರಲಿ ಕಡೆಕಾರ್, ಸಂಘಟನಾ ಸಮಿತಿ ಸರ್ವ ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ತದನಂತರ ಸರಕಾರಿ ಪ್ರೌಢಶಾಲೆ ಇದು ವಿದ್ಯಾರ್ಥಿಗಳಿಂದ ಲವಣಾಸುರ ಕಾಳಗ, ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ವಿದ್ಯಾರ್ಥಿಗಳಿಂದ ಮೈಂದದ್ವಿವಿದ ಯಕ್ಷಗಾನದ ಕಾರ್ಯಕ್ರಮ ನೆರವೇರಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!