spot_img
Monday, March 16, 2026
spot_img

ನಮ್ಮ ಮೆಟ್ರೋ ಹಳದಿ ಮಾರ್ಗ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಬೇಸರ

ಜನಪ್ರತಿನಿಧಿ (ಬೆಂಗಳೂರು) : ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಹಾಗೂ ಕಾರ್ಯಾಚರಣೆ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಅವರು ಸಬೂಬು ನೀಡಿದ್ದಾರೆ.

ಈ ಬಗ್ಗೆ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸೂರ್ಯ, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು ಬಿಎಂಆರ್’ಸಿಎಲ್ ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದು ನಮ್ಮೆಲ್ಲರನ್ನು ನಿರಾಶೆಗೊಳಿಸಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ, ಉತ್ಪಾದನೆಯನ್ನು ತ್ವರಿತಗೊಳಿಸಲು ನಾನು ರೈಲು ತಯಾರಕರಾದ ತೀತಗಢ್ ರೈಲ್ ಸಿಸ್ಟಮ್ಸ್‌ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಎಂಜಿನಿಯರ್‌ಗಳಿಗೆ ವೀಸಾ ಸೇರಿದಂತೆ ಹಲವು ರಸ್ತೆ ತಡೆಗಳನ್ನು ಪರಿಹರಿಸಲಾಗಿದೆ. ಈಗ ಜನವರಿ 6 ರಂದು ಬೆಂಗಳೂರಿಗೆ ಕಳುಹಿಸಲು ಮೊದಲ ರೈಲು ಸಿದ್ಧವಾಗಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ರೈಲನ್ನು ಮತ್ತು ಏಪ್ರಿಲ್‌ನಲ್ಲಿ ಮೂರನೇ ರೈಲನ್ನು ತಲುಪಿಸುವುದಾಗಿ ತೀತಗಢ್‌ ತಿಳಿಸಿದೆ. ಅದಾದ ಬಳಿಕ, ತಿಂಗಳಿಗೆ 1 ರೈಲನ್ನು ಸರಬರಾಜು ಮಾಡುವುದಾಗಿ ಹೇಳಿದೆ.

ಸೆಪ್ಟೆಂಬರ್ ವೇಳೆಗೆ ತಿಂಗಳಿಗೆ 2 ರೈಲುಗಳನ್ನು ಬೆಂಗಳೂರಿಗೆ ಕಳುಹಿಸುವ ಪ್ರಯತ್ನ ಸಹ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ನಗರಾಭಿವೃದ್ಧಿ ಇಲಾಖೆ ಸಚಿವರಿಗೂ ಜನವರಿ 6 ರಂದು ತೀತಗಢಕ್ಕೆ ತೆರಳಿ ಪರಿಶೀಲಿಸಲು ಮನವಿ ಮಾಡಿಕೊಂಡಿದ್ದೇನೆ. ಈ ವೇಳೆ ಬೆಂಗಳೂರಿಗೆ ಬರಲಿರುವ ಮೆಟ್ರೋ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ರೈಲುಗಳ ತ್ವರಿತ ಪೂರೈಕೆಗೆ ಸಹಾಯ ಮಾಡಲು ಘಟಕ ಪರಿಶೀಲನೆ ಮಾಡಲಿದ್ದಾರೆ. ಈ ಸಂಬಂಧ ನಾನು ಕೊಲ್ಕತ್ತಾಗೆ ತೆರಳಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಹಳದಿ ಮಾರ್ಗ ಕಾರ್ಯಾಚರಣೆ ವಿಳಂಬದಿಂದ ನಾನು ನಿರಾಶೆಗೊಂಡಿದ್ದಾರೆ. ಆದರೆ, ಇನ್ಮುಂದೆ ಯಾವುದೇ ರೀತಿಯ ಅಡ್ಡಿಗಳು ಬರದಂತೆ ನೋಡಿಕೊಳ್ಳುತ್ತೇವೆ. ಶೀಘ್ರದಲ್ಲೇ ಹಳದಿ‌ ಮೆಟ್ರೋ ಮಾರ್ಗ ಕಾರ್ಯಾಚರಣೆ ಆಗಲಿದೆ ಎಂದು ಭರವಸೆ ನೀಡಿದ್ದಾರೆ.

https://x.com/Tejasvi_Surya/status/1874632121106698632

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!