spot_img
Wednesday, April 1, 2026
spot_img

ಸಚಿನ್‌ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ಸ್ಪೋಟಕ ಆಡಿಯೋ ರಿಲೀಸ್‌ ಮಾಡಿ ಬಿಜೆಪಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಜನಪ್ರತಿನಿಧಿ (ಬೆಂಗಳೂರು) : ಗುತ್ತಿಗೆದಾರ ಸಚಿನ್‌ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಹಾಗಿದ್ದರೂ ನನ್ನ ವಿರುದ್ಧ ಸುಖಾಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಚಿನ್ ಪಾಂಚಲ್ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಗಳಲ್ಲಿ ಹೊಂದಾಣಿಕೆ ಇಲ್ಲ ಎಂದರು.

ಸಂತೋಷ್ ಪಾಟೀಲ್ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022, ಏಪ್ರಿಲ್ 12 ರಂದು ಉಡುಪಿಯ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುತ್ತಿಗೆದಾರರ ಸಂತೋಷ್ ಪಾಟೀಲ್ ಡೆತ್ ನೋಟ್ ನಲ್ಲಿ ಅಂದಿನ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ, ಹೆಂಡತಿ ಮಕ್ಕಳಿಗೆ ಪರಿಹಾರ ಕೊಡಬೇಕು ಎಂದು ಹೇಳಿದ್ದರು. ಆದರೆ ಸಚಿನ್ ಪಾಂಚಲ್ ಡೆತ್ ನೋಟ್ ನಲ್ಲಿ ನನ್ನ ಹೆಸರು ಏಲ್ಲಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಸಂತೋಷ್ ಪಾಟೀಲ್ ಕುಟುಂಬಕ್ಕೆ ಬಿಜೆಪಿಗರು ಸಹಾಯ ಮಾಡಿದ್ದಾರಾ? ಸಂತೋಷ್ ಪಾಟೀಲ್ ಕುಟುಂಬವನ್ನು ಬಿಜೆಪಿಯವರು ಇದುವರೆಗೂ ಏಕೆ ಭೇಟಿ ಮಾಡಿಲ್ಲ? ಕೇವಲ ಮೊಸಳೆ ಕಣ್ಣೀರು ಸುರಿಸಿದರೆ ರಾಜ್ಯದ ಜನ ಮೋಸ ಹೋಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇದೇ ವೇಳೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಧ್ವನಿಯುಳ್ಳ ಆಡಿಯೋವೊಂದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.

ಈ ಮಣಿಕಂಠ ರಾಠೋಡ್‌ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಣಿಕಂಠ ರಾಠೋಡ್‌ ನೇತೃತ್ವದಲ್ಲೇ ಬಿಜೆಪಿ ಕಲಬುರಗಿ ಚಲೋಹಮ್ಮಿಕೊಂಡಿದೆ ಎಂದು ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದರು.

https://x.com/PriyankKharge/status/1874486887081292123

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!