spot_img
Sunday, February 15, 2026
spot_img

ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ !

ಜನಪ್ರತಿನಿಧಿ (ಬೆಂಗಳೂರು) : ಹೊಸ ವರ್ಷಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಜನರಿಗೆ ಬೆಲೆ ಏರಿಕೆ ಬರೆ ಕೊಟ್ಟಿದೆ. ಸಾರ್ವಜನಿಕ ಸಾರಿಗೆ ಪ್ರಯಾಣವು ಮತ್ತಷ್ಟು ದುಬಾರಿ ಆಗಲಿದೆ. ನಾಲ್ಕು ನಿಗಮಗಳ ಬಹುದಿನಗಳ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಬಸ್ ಟಿಕೆಟ್ ದರ ಏರಿಕೆಗೆ ಅಸ್ತು ಎಂದಿದೆ. ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಇಂದು(ಗುರುವಾರ) ಒಪ್ಪಿ ಅನುಮೋದನೆ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ ಅಧಿಕಾರಿಗಳು ತಿಂಗಳುಗಳ ಬೇಡಿಕೆ ಈಡೇರಿದಂತಾಗದೆ. ಸದ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದು ಬಾಕಿ ಇದೆ.

ಇಂದು(ಗುರುವಾರ) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಲ್ಕು ನಿಗಮ ಟಿಕೆಟ್ ದರ ಏರಿಕೆ ಕುರಿತು ಅನುಮೋದನೆ ನೀಡಲಾಗಿದೆ. ಶೇಕಡಾ 15ರಷ್ಟು ಟಿಕೆಟ್ ದರ ಏರಿಕೆ ಆಗಬಹುದು ಎಂದು ಹೇಳಲಾಗಿದೆ. ಈ ಕುರಿತು ಅಧಿಕೃತ ಆದೇಶ ಬಂದಲ್ಲಿ, ಯಾವಾಗಿನಿಂದ ಈ ಹೊಸ ದರ ಜಾರಿ ಆಗಲಿದೆ, ಸಲಹೆ, ಸೂಚನೆಗಳು ತಿಳಿಯಲಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!