spot_img
Friday, May 22, 2026
spot_img

ಐ‌ಎಂಜೆ ಉಪಪ್ರಾಂಶುಪಾಲ ಪ್ರೊ ಮೆಲ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

ಜನಪ್ರತಿನಿಧಿ ವಾರ್ತೆ (ಕುಂದಾಪುರ): ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಪ್ರೊ ಮೆಲ್ವಿನ್ ಡಿಸೋಜ ಅವರು ಸಿದ್ಧಪಡಿಸಿ ಮಂಡಿಸಿದ “ಡೀಪ್ ಲರ್ನಿಂಗ್ ಆಧಾರಿತ ವಿಧಾನದಿಂದ, ಥರ್ಮಲ್ ಚಿತ್ರಗಳನ್ನು ಬಳಸಿ ಆರಂಭಿಕ ಸ್ತನ ಕ್ಯಾನ್ಸರ್ ಪತ್ತೆ ಹಚ್ಚುವಿಕೆ” ಎಂಬ ಶೀರ್ಷಿಕೆಯ ಮಹಾ ಪ್ರಬಂದಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.

ಡಾ. ಮೆಲ್ವಿನ್ ಅವರ ಸಂಶೋಧನೆಯು ಆಧುನಿಕ ಕೃತಕ ಬುದ್ದಿಮತ್ತೆ ತಂತ್ರಜ್ಞಾನದಿಂದ ಆರಂಭಿಕ ಹಂತದಲ್ಲೇ ಸ್ಥನ ಕ್ಯಾನ್ಸರ್ ಪತ್ತೆ ಹಚ್ಚುವ ಸಂಶೋಧನ ವರದಿಯಾಗಿದ್ದು, ಈ ಸಂಶೋಧನೆಯ ಫಲಿತಾಂಶಗಳನ್ನು ಬರೆದು ಸಿದ್ದಪಡಿಸಿದ ವರದಿಗಳು ಅಂತಾರಾಷ್ಟ್ರೀಯ ಪ್ರತಿಷ್ಟಿತ ಸಂಶೋಧನ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ.

ಇವರು ಖ್ಯಾತ ಸೈಬರ್ ಭದ್ರತಾ ತಜ್ಞ ಮತ್ತು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ ಅನಂತ್ ಪ್ರಭು ಜಿ ಅವರ ಮಾರ್ಗದರ್ಶನದಲ್ಲಿ ಸಂಶೋಧನ ಕಾರ್ಯಗಳನ್ನು ಮಾಡಿದ್ದಾರೆ.

ಡಾ ಮೆಲ್ವಿನ್ ಡಿಸೋಜ ಅವರು ಕುಂದಾಪುರದ ಬಸ್ರೂರು ಗ್ರಾಮದ ಮೇರ್ಡಿ ಯವರಗಿದ್ದು, ದಿ. ಪೀಟರ್ ಡಿಸೋಜಾ ಮತ್ತು ಸ್ಟೆಲ್ಲಾ ಡಿಸೋಜಾ ಇವರ ಕಿರಿಯ ಪುತ್ರ. ಇವರ ಈ ಸಾಧನೆಗೆ ಐ ಎಂ ಜೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸಿದ್ದಾರ್ಥ್ ಜೆ ಶೆಟ್ಟಿ ಮತ್ತು ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ ಅಬ್ದುಲ್ ಕರೀಮ್ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!