spot_img
Friday, April 3, 2026
spot_img

ಉತ್ತಮ ಸಾರಿಗೆ ವ್ಯವಸ್ಥೆಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ನಂಬರ್ 1 | ಸಮಯಕ್ಕೆ ತಕ್ಕನಾಗಿ ಬಸ್ ಖರೀದಿ ವೇತನ ಪರಿಷ್ಕರಣೆ : ಸಚಿವ ರಾಮಲಿಂಗಾ ರೆಡ್ಡಿ

ಜನಪ್ರತಿನಿಧಿ (ಬೆಂಗಳೂರು) : ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ ಮಾಡಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ ಹಾಗೂ ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದ್ದರು. ಆಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ ? ಎಂದು ಅವರು ಪ್ರಶ್ನಿಸಿದ್ದಾರೆ.

ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೆ ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲಕ್ಕು ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತಿರಲಿಲ್ಲ. ಸಮಯಕ್ಕೆ ತಕ್ಕನಾಗಿ ಬಸ್ ಖರೀದಿ ವೇತನ ಪರಿಷ್ಕರಣೆ, ನೇಮಕಾತಿ ಸೇರಿದಂತೆ ಎಲ್ಲವನ್ನು ಸಮಯ ತಕ್ಕನಾಗಿ ಮಾಡಿದರೆ ಇವಾಗ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

ಬಿಜೆಪಿಯವರು ಮಾಡಿರುವ ಆಡಳಿತ ಲೋಪದಿಂದ ಈಗ ನಮ್ಮ ತಲೆ ಮೇಲೆ ₹5900 ಕೋಟಿ ಸಾಲ ಇಟ್ಟು ಹೋಗಿದ್ದಾರೆ. ಅವರಿಗೆ ಮುಂಚೆನೇ ತಿಳಿದಿತ್ತೋ ಏನೋ 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಿಕೆ ಬರವಲ್ಲ ಎಂದು ತಿಳಿದು ಈ ರೀತಿಯ ಎಲ್ಲ ಕೆಟ್ಟ ಆಡಳಿತ ನಡೆಸಿ ನಮ್ಮ ತಲೆ ಮೇಲೆ ಕಟ್ಟಿದರು ಎಂದಿದ್ದಾರೆ.

ನಾನು ಸಾರ್ವಜನಿಕರ ಗಮನ ಸೆಳೆಯಲು ಇಚ್ಛೆಸುತ್ತೇನೆ.. ನಾವು ಬಸ್ ದರ ಹೆಚ್ಚಿಸಿರುವುದು ಎಲ್ಲದಕ್ಕಿಂತ ಕಡಿಮೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನೋಡಿದರೆ ನಮ್ಮ ರಾಜ್ಯದಲ್ಲೇ ಕಡಿಮೆ ಇದೆ ಹಾಗೂ ಉತ್ತಮ ಸಾರಿಗೆ ವ್ಯವಸ್ಥೆ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ನಂಬರ್ 1. ಈಗಲಾದರೂ ಬಿಜೆಪಿಯವರು ಕೇವಲ ಸುಳ್ಳು ಹೇಳಿ ತನ್ನ ಟ್ವಿಟ್ಟರ್, ಫೇಕ್ ವಾಟ್ಸಪ್ ಸೋಷಿಯಲ್ ಮೀಡಿಯಾ ಯುನಿವರ್ಸಿಟಿಯಿಂದ ಜನರ ದಾರಿ ತಪ್ಪಿಸುವುದನ್ನು ಬಿಡಬೇಕು ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!