spot_img
Wednesday, April 1, 2026
spot_img

ಸಿ.ಟಿ ರವಿ ಅವಾಚ್ಯ ಪದ ಬಳಕೆ ಪ್ರಕರಣ : ಸಚಿವೆ ಹೆಬ್ಬಾಳ್ಕರ್‌ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ, ಹೇಳಿಕೆ ದಾಖಲು !

ಜನಪ್ರತಿನಿಧಿ (ಬೆಂಗಳೂರು) : ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ನೀಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ಸಂದರ್ಭದಲ್ಲಿ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿತ್ತು‌.

ಪ್ರಕರಣದ ತನಿಖಾಧಿಕಾರಿಯಾಗಿರುವ ಸಿಐಡಿಯ ಡಿವೈಎಸ್‌ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ, ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಂಡಿದೆ.

ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರಕರಣವನ್ನು ನಾನು ಪ್ರತಿಷ್ಠೆಯಾಗಿ ಸ್ವೀಕರಿಸುವುದಿಲ್ಲ. ಇದು ನನ್ನ ಸ್ವಾಭಿಮಾನದ ಪ್ರಶ್ನೆ ಹಾಗೂ ಓರ್ವ ಹೆಣ್ಣುಮಗಳಿಗೆ ಆಗಿರುವ ಅವಮಾನದ ಪ್ರಶ್ನೆಯಾಗಿದೆ. ಪ್ರಕರಣದ ತನಿಖೆ ಈಗಿನ್ನೂ ಆರಂಭವಾಗಿದೆ. ಹಿನ್ನಡೆ ಅಥವಾ ಮುನ್ನಡೆಯ ಕುರಿತು ಚಿಂತಿಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕಿದೆಯೋ ಅದು ಆಗಲಿದೆ. ಈ ವಿಚಾರದಲ್ಲಿ ಓರ್ವ ಹೆಣ್ಣುಮಗಳಾಗಿ ಎಲ್ಲರೂ ನನ್ನೊಂದಿಗೆ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!