spot_img
Wednesday, April 1, 2026
spot_img

ಕಾಂಗ್ರೆಸ್‌ನಲ್ಲಿ ʼಸಿದ್ದ ವರ್ಸಸ್‌ ಸಿದ್ಧ ಸ್ಥಿತಿʼ | ಬಜೇಟ್ ಅಧಿವೇಶನದ ಬಳಿಕ ಸಿದ್ದರಾಮಯ್ಯ ರಾಜೀನಾಮೆ : ವಿಜಯೇಂದ್ರ ಭವಿಷ್ಯ

ಜನಪ್ರತಿನಿಧಿ (ಶಿವಮೊಗ್ಗ) : ಸಿಎಂ ಸಿದ್ದರಾಮಯ್ಯ ಅವರು ಬಜೇಟ್ ಅಧಿವೇಶನದ ನಂತರ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದಲ್ಲಿಯೇ ಚರ್ಚೆ ನಡೆಯುತ್ತಿದೆ. ಇದೇ ಕಾರಣಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಆಯೋಜಿಸುವ ಮೂಲಕ ರಾಜಕೀಯ ದಾಳ ಉರುಳಿಸಿದ್ದಾರೆಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಇಂದು೯ಶನಿವಾರ) ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ತಯಾರಿಲ್ಲ. ಅದೇ ರೀತಿ ಕಾಂಗ್ರೆಸ್‌ ನಲ್ಲಿರುವ ವಿರೋಧಿ ಬಣ ಸಿದ್ದರಮಾಯ್ಯ ಅವರನ್ನು ಸಿಎಂ ಸ್ಥಾನದಲ್ಲಿ ಉಳಿಸಲು ಸಿದ್ದರಿಲ್ಲ. ಹಾಗಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಸಿದ್ದ ವರ್ಸಸ್‌ ಸಿದ್ಧ ಸ್ಥಿತಿ ಇದೆ ಎಂದು ಅವರು ವ್ಯಂಗ್ಯವಾಡಿದರು.

ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಔತಣಕೂಟ ಆಯೋಜಿಸಿರುವುದು ಕಾಂಗ್ರೆಸ್‌ ಪಕ್ಷದ ಒಳಗಿನ ವೈಮನಸ್ಸನ್ನು ಎತ್ತಿ ತೋರಿಸುತ್ತದೆ.

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆಯಾಗಿ ಸಚಿವ ಕೆ. ಜಿ ಜಾರ್ಜ್‌ ನಿರ್ದೋಷಿಯಾಗಿದ್ದಾರೆ. ಅದೇ ರೀತಿ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ಪ್ರಾಮಾಣಿಕರರಾಗಿದ್ದರೆ ಸಿಬಿಐ ತನಿಖೆಗೆ ವಹಿಸಲಿ. ಕಾಂಗ್ರೆಸ್‌ ಪಕ್ಷದಲ್ಲಿಯೇ ಪ್ರಿಯಾಂಕ್‌ ಖರ್ಗೆ ವಿರೋಧಿಗಳಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರನ್ನು ಈ ವಿಚಾರದಲ್ಲಿ ಅವರು ನಂಬುವುದು ಬೇಡ. ಸಿಬಿಐ ತನಿಖೆಯಾದರೇ ಸಚಿನ್‌ ಪಾಂಚಾಳ್‌ ಕುಟುಂಕ್ಕೂ ನ್ಯಾಯ ದೊರೆಯಲಿದೆ. ಪ್ರಾಮಾಣಿಕವಾಗಿದ್ದರೆ ಪ್ರಿಯಾಂಕ್‌ ಖರ್ಗೆ ಅವಿರಗೂ ನ್ಯಾಯ ದೊರಯಲಿದೆ ಎಂದವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್‌ ಎನ್‌ ಚನ್ನಬಸಪ್ಪ, ಡಿ. ಎಸ್‌ ಅರುಣ್, ಡಾ. ಧನಂಜಯ್‌ ಸರ್ಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ. ಡಿ ಮೇಘರಾಜ್‌ ಉಪಸ್ಥಿತರಿದ್ದರು. ‌

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!