spot_img
Wednesday, March 25, 2026
spot_img

ಸಹಕಾರ ಕ್ಷೇತ್ರಕ್ಕೆ ವಿಧಾನ ಪರಿಷತ್ ಪ್ರಾತಿನಿಧ್ಯ ಅಗತ್ಯ-ಯಶ್ ಪಾಲ್ ಸುವರ್ಣ

ಸಾಲಿಗ್ರಾಮದಲ್ಲಿ ‘ಸೌಹಾರ್ದ ಸಹಕಾರಿ ದಿನಾಚರಣೆ 2025’, ‘ಬೆಳ್ಳಿ ಹಬ್ಬದ ವರ್ಷ’ ಕಾರ್ಯಕ್ರಮ ಉದ್ಘಾಟನೆ

ಜನಪ್ರತಿನಿಧಿ ವಾರ್ತೆ, (ಸಾಲಿಗ್ರಾಮ): ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ಸಹಕಾರ ಕ್ಷೇತ್ರ ನೀಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗಿಂತಲೂ ಉತ್ತಮವಾದ ಸೇವೆ ಸಹಕಾರ ಸಂಘಗಳಿಂದ ದೊರಕುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಸಾಧನೆ ರಾಜ್ಯ ಮಟ್ಟದಲ್ಲಿ ಗುರುತಿಸುವಂತಾಗಿದೆ. ಪ್ರಬಲ ವ್ಯವಸ್ಥೆಯಾಗಿ ಬೆಳೆದಿರುವ ಸಹಕಾರ ಕ್ಷೇತ್ರಕ್ಕೆ ವಿಧಾನ ಪರಿಷತ್ತಿನಲ್ಲಿ ಪ್ರಾತಿನಿಧ್ಯ ಸಿಗುವಂತಾಗಬೇಕು. ಆ ಹಿನ್ನೆಲೆಯಲ್ಲಿ ಈಗಾಗಲೇ ಸರಕಾರಕ್ಕೆ ಒತ್ತಾಯ ಮಾಡಿದ್ದೇವೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಅವರು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ನಿ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ., ಸೈಬರಕಟ್ಟೆ, ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಂಘ ನಿ. ಸಾಲಿಗ್ರಾಮ, ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ, ಕೋಡಿ ಕನ್ಯಾಣ ಇವರ ಸಹಕಾರದೊಂದಿಗೆ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಜ.4ರಂದು ನಡೆದ ಸೌಹಾರ್ದ ಸಹಕಾರಿ ದಿನಾಚರಣೆ 2025, ಬೆಳ್ಳಿ ಹಬ್ಬದ ವರ್ಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಹಕಾರ ವ್ಯವಸ್ಥೆ ಜನರಲ್ಲಿ ವಿಶ್ವಾಸವನ್ನು ಮೂಡಿಸಿದೆ. ಆರ್ಥಿಕ ಶಕ್ತಿಯನ್ನು ನೀಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾದ ಸಹಕಾರ ಚಳವಳಿ ಇವತ್ತು ಬಲಿಷ್ಟವಾಗಿ ಬೆಳೆದು ನಿಂತಿದೆ. ಸಹಕಾರ ಕ್ಷೇತ್ರ ವಿಶಾಲವಾಗಿ ಬೆಳೆದಿದೆ. ಆಧ್ಯತಾ ವಲಯವಾಗಿರುವ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕವಾದ ನ್ಯಾಯಾಲಯದ ಅವಶ್ಯಕತೆ ಇದೆ ಎಂದರು.

ಸಹಕಾರ ವ್ಯವಸ್ಥೆಯಲ್ಲಿ ಸೌಹಾರ್ದ ಸಹಕಾರಿಗಳ ಪಾತ್ರ ಮಹತ್ವದ್ದಾಗಿದ್ದು, 25 ವರ್ಷಗಳನ್ನು ಆಚರಿಸಿಕೊಳ್ಳುತ್ತಿರುವ ಸೌಹಾರ್ದ ಸಹಕಾರಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸಹಕಾರಿಗಳಿಗೆ ಸನ್ಮಾನಿಸಿ ಮಾತನಾಡಿ, ಸಹಕಾರ ಸಂಘಗಳು ರಾಷ್ಟ್ರೀಕೃತ ಬ್ಯಾಂಕಗಳಿಗೆ ಸಮಾನಾಂತವಾಗಿ ಸೇವೆ ಸಲ್ಲಿಸುತ್ತಿವೆ. ರಾಷ್ಟ್ರೀಕೃತ ಬ್ಯಾಂಕುಗಳು ವಿಲೀನವಾದ ಬಳಿಕ ಸೇವೆಯಲ್ಲಿ ವ್ಯತ್ಯಯವಾಯಿತು. ಸಹಕಾರ ಸಂಘಗಳು ಜನರ ವಿಶ್ವಾಸ ಗಳಿಸಿಕೊಂಡು ಉತ್ತಮ ಸೇವೆ ನೀಡುತ್ತಾ ರಾಜ್ಯ, ರಾಷ್ಟ್ರದ ಗಮನ ಸಳೆಯುತ್ತಿವೆ. ಸೌಹಾರ್ದ ಸಹಕಾರ ಸಂಘಗಳು ಇನ್ನೂ ಹೆಚ್ಚು ಬೆಳೆಯಲಿ ಎಂದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ನಿರ್ದೇಶಕರಾದ ಮಂಜುನಾಥ ಎಸ್.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ ದೇವಸ್ಯ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಜೈ ಗಣೇಶ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಅಶೋಕ್ ಪ್ರಭು, ಕೋಡಿ ಕನ್ಯಾಣದ ಶ್ರೀರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶಂಭು ಪೂಜಾರಿ, ಸಾಲಿಗ್ರಾಮದ ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಸತೀಶ್ ಕೆ.ನಾಯ್ಕ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ಯದ ಸೌಹಾರ್ದ ಸಹಕಾರಿ ಸಾಧಕರಾದ ಸಂಜೀವ ಅಡ್ಯಾರ್, ಪಿ.ಮುತ್ತಣ್ಣ, ಸ್ವಾಮಿ ಚಾಮರಾಜನಗರ, ದೇವರಾಜು ಚಿಕ್ಕಮಗಳೂರು, ಬಿ.ಟಿ ಮಂಜುನಾಥ ಮಂಡ್ಯ, ಜಿ.ಎನ್ ಮಧುಸೂಧನ್ ಚನ್ನರಾಯಪಟ್ಟಣ, ಡಾ.ವಿಶ್ವನಾಥಯ್ಯ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲೆಯ ಸಹಕಾರಿ ಸಾಧಕರಾದ ಗಣೇಶ ಕಾಮತ್ ಗಂಗೊಳ್ಳಿ, ಅಶೋಕ್, ಜಗನ್ನಾಥ ಶೆಟ್ಟಿ ಅಂಪಾರು ಅವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ., ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ ರಾವ್ ಅವರನ್ನು ಗೌರವಿಸಲಾಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ನಿರ್ದೇಶಕರಾದ ಮಂಜುನಾಥ ಎಸ್.ಕೆ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಅಂಪಾರು ಜಗನ್ನಾಥ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಡುಪಿ ಮತ್ತು ದ.ಕ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ವಂದಿಸಿದರು. ಶಿಕ್ಷಕ ಸತೀಶ್ ಚಿತ್ರಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಹಿತ್ ಜಿ ಸಾಲಿಯಾನ್ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!