spot_img
Wednesday, March 25, 2026
spot_img

ಗಂಗೊಳ್ಳಿ ಮೀನುಗಾರಿಕಾ ಬಂದರು ಆಧುನಿಕರಣ ಆಡಳಿತ ಮಂಜೂರಾತಿ-ಶಾಸಕ ಗಂಟಿಹೊಳೆ

ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.
ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ ೨೨.೧೮ ಕೋಟಿ ರೂ. ಅಂದಾಜು ಮೊತ್ತದ ಮೂಲ ಸೌಕರ್ಯ ಕಾಮಗಾರಿಗಳಿಗೆ ಕೇಂದ್ರದ ಅನುಮೋದನೆ ಆಗಿದ್ದು ರಾಜ್ಯ ಸರ್ಕಾರದ ಆಡಳಿತ ಅನೋಮೋದನೆ ಬಾಕಿ ಇತ್ತು. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಸದನದ ಗಮನ ಸೆಳೆದು ರಾಜ್ಯ ಸರಕಾರದಿಂದ ಕೂಡಲೇ ಆಡಳಿತ ಅನುಮೋದನೆ ನೀಡುವಂತೆ ಆಗ್ರಹಿಸಿದ್ದರು.
ಅದರಂತೆ ರಾಜ್ಯ ಸರ್ಕಾರ ಆಡಳಿತ ಅನುಮೋದನೆ ನೀಡಲು ಒಪ್ಪಿದೆ ಎಂದು ಶಾಸಕ ಕಚೇರಿ ಪ್ರಕಟನೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!