spot_img
Wednesday, January 8, 2025
spot_img

ಹಿರಿಯ ಸಾಹಿತಿ ಡಾ.ನಾ ಡಿಸೋಜ ನಿಧನ

ಜನಪ್ರತಿನಿಧಿ ವಾರ್ತೆ (ಕುಂದಾಪುರ): ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ನಾ ಡಿಸೋಜ (87ವ) ಅವರು ಡಿ.5ರ ರಾತ್ರಿ ನಿಧನರಾದರು. ವಯೋ ಸಹಜ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಡಾ. ನಾ ಡಿಸೋಜ ಅವರು ಮಕ್ಕಳ ಸಾಹಿತ್ಯದ ಮೂಲಕ ಪ್ರಸಿದ್ಧರಾಗಿದ್ದರು. ಅವರು ಒಟ್ಟು 37 ಕಾದಂಬರಿಗಳು, ನಾಲ್ಕು ನಾಟಕಗಳು ಹಾಗೂ ಇಪ್ಪತ್ತೆಂಟು ಮಕ್ಕಳ ಕೃತಿಗಳು ರಚಿಸಿದ್ದಾರೆ. ಇವರು ಬರೆದ ಕಾಡಿನ ಬೆಂಕಿ, ದ್ವೀಪ ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಲಾಗಿತ್ತು. ಈ ಸಿನಿಮಾಗಳಿಗೆ ರಜತಕಮಲ ಮತ್ತು ಸ್ವರ್ಣಕಮಲ ಪ್ರಶಸ್ತಿಗಳು ಬಂದಿವೆ.ಡಾ. ನಾ ಡಿಸೋಜ ಪರಿಸರ ಕಾಳಜಿ ಹಾಗೂ ಮಕ್ಕಳ ಸಾಹಿತ್ಯ ಸೇರಿದಂತೆ ಎಲ್ಲಾ ಪ್ರಕಾರಗಳ ಕೃತಿಗಳನ್ನು ಸಹ ರಚಿಸಿದ್ದರು.

ಇವರ ಕಿರಿ ಕಾದಂಬರಿ ಮುಳುಗಡೆಯ ಊರಿಗೆ ಬಂದವರು, 2011ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಪಾತ್ರವಾಗಿತ್ತು. 2014ರ ಜನವರಿಯಲ್ಲಿ ಮಡಿಕೇರಿಯಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಂಗಳೂರು ಸಂದೇಶ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ ಹಾಗೂ ನವದೆಹಲಿ ಕಥಾ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!