spot_img
Thursday, April 2, 2026
spot_img

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್  ಅಧ್ಯಕ್ಷರಾಗಿ  ಶಶಿಕುಮಾರ್ ರೈ ಬಾಲ್ಯೋಟ್ಟು ಅವಿರೋಧ ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಇದರ ನೂತನ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ನೀಲಯ ಎಂ ಅಗರಿ ಯವರು ಆಯ್ಕೆಗೊಂಡಿರುತ್ತಾರೆ.

ಸೋಮವಾರ ಯೂನಿಯನ್‌ನ ಕಚೇರಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಉಪಸ್ಥಿತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ  ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ಶಶಿಕುಮಾರ್‌ ರೈ ಬಾಲ್ಯೊಟ್ಟು(ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಅವರನ್ನು ಮತ್ತು ಉಪಾಧ್ಯಕ್ಷರನ್ನಾಗಿ ನೀಲಯ ಎಂ.ಅಗರಿ ಅವರನ್ನು (ಮಂಗಳೂರು ತಾಲೂಕಿನ ಮೂಡುಬಿದಿರೆ ಮತ್ತು ಮೂಲ್ಕಿ ಫಿರ್ಕಾ ಹೊರತುಪಡಿಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಆಯ್ಕೆ ಮಾಡಲಾಯಿತು.

ನಿರ್ದೇಶಕರ ಅವಿರೋಧ ಆಯ್ಕೆ : ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ  ನಿರ್ದೇಶಕ ಸ್ಥಾನಕ್ಕೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಮಂಗಳೂರು ತಾಲೂಕಿನ ಫ್ಯಾಕ್ಸ್ ಸಂಘಗಳ ಕ್ಷೇತ್ರದಿಂದ ನೀಲಯ ಎಂ. ಅಗರಿ, ಬಂಟ್ವಾಳ ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ. ಪದ್ಮಶೇಖರ್ ಜೈನ್,  ಪುತ್ತೂರು ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಶಶಿಕುಮಾರ್ ರೈ ಬಾಲ್ಯೋಟ್ಟು, ಸುಳ್ಯ ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ವಿಷ್ಣು ಭಟ್ ಬಿ.  ಬೆಳ್ತಂಗಡಿ ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಸತೀಶ್ ಕೆ., ಮಂಗಳೂರು ತಾಲೂಕಿನ ಮೂಡಬಿದ್ರೆ – ಮುಲ್ಕಿ ಫಿರ್ಕಾ ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಜೊಯ್ಲಸ್ ವಿಲ್ಫ್ರೇಡ್ ಡಿ’ ಸೋಜ, ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಸುಧಾಕರ ಪಿ. ಶೆಟ್ಟಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಹಕಾರಿ ಕ್ಷೇತ್ರದಿಂದ ಮಂಜುನಾಥ್ ಎನ್. ಎಸ್, ಮಹಿಳಾ ಸಹಕಾರಿ ಸಂಘಗಳ ಕ್ಷೇತ್ರದಿಂದ ಸವಿತಾ ಎನ್. ಶೆಟ್ಟಿ, ಪಟ್ಟಣ ಸಹಕಾರಿ ಬ್ಯಾಂಕ್, ಪತ್ತಿನ ಸಹಕಾರಿ ಸಂಘಗಳ ಕ್ಷೇತ್ರದಿಂದ ಡಾ. ಎಸ್. ಆರ್. ಹರೀಶ್ ಆಚಾರ್ಯ, ಮೀನುಗಾರಿಕಾ ಸಹಕಾರ ಸಂಘಗಳು, ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ. ಸಂಜೀವ ಪೂಜಾರಿ, ಜಿಲ್ಲೆಯ ಮಾರಾಟ ಸಹಕಾರಿ ಸಂಘಗಳ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಹಕಾರ ಬ್ಯಾಂಕುಗಳ ಕ್ಷೇತ್ರದಿಂದ ಪ್ರವೀಣ್ ಗಿಲ್ಬರ್ಟ್ ಪಿಂಟೊ ಹಾಗೂ ಇತರ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಚಿತ್ತರಂಜನ್ ಬೋಳಾರ್ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷರ ಚುನಾವಣೆಯ ಸಂದರ್ಭ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್,  ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಇವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!