spot_img
Thursday, April 2, 2026
spot_img

ಬಿ.ಬಿ. ಹೆಗ್ಡೆ ಕಾಲೇಜು: ಕೆ. ಗಾಯತ್ರಿ ಶೇಟ್ ಅವರಿಗೆ ಗೌರವಾರ್ಪಣೆ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನ ಸಂಘದ ಆಶ್ರಯದಲ್ಲಿ ವಯೋನಿವೃತ್ತಿ ಹೊಂದಿದ ಕಾಲೇಜಿನ ಕಚೇರಿ ಅಧೀಕ್ಷಕರಾದ ಕೆ. ಗಾಯತ್ರಿ ಶೇಟ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕೆ. ಗಾಯತ್ರಿ ಶೇಟ್ ಅವರು ನಮ್ಮ ಸಂಸ್ಥೆ ಆರಂಭಗೊಂಡ ದಿನದಿಂದಲೇ ಕಚೇರಿ ಸಿಬ್ಬಂದಿಯಾಗಿ ಸೇರ್ಪಡೆಗೊಂಡು ಬೇರೆ-ಬೇರೆ ಹುದ್ದೆಗಳನ್ನು ನಿಭಾಯಿಸಿ, ಕಚೇರಿ ಅಧೀಕ್ಷಕರಾಗಿ ವಯೋನಿವೃತ್ತಿ ಹೊಂದುತ್ತಿದ್ದಾರೆ. ಕಡತಗಳ ನಿರ್ವಹಣೆ ಸೇರಿದಂತೆ ಅನೇಕ ಮಹತ್ವದ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕರಾಗಿ ನಿರ್ವಹಿಸಿದವರು. ನಮ್ಮ ಸಂಸ್ಥೆಗೆ ಅವರು ಸಲ್ಲಿಸಿದ ಸೇವೆ ಉಲ್ಲೇಖನೀಯ ಎಂದರು.

ಕಾಲೇಜಿನ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸನ್ಮಾನ ಪತ್ರ ವಾಚಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಹಾಗೂ ಕಛೇರಿ ಸಿಬ್ಬಂದಿ ಸುಧೀಂದ್ರ ಕೆ.ಎಸ್. ಸನ್ಮಾನಿತರ ಕುರಿತು ಅಭಿಪ್ರಾಯ ಹಂಚಿಕೊಂಡರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಪ್ರಾರ್ಥಿಸಿ, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಹರೀಶ್ ಕಾಂಚನ್ ವಂದಿಸಿ, ಗಣಿತಶಾಸ್ತ್ರ ಪ್ರಾಧ್ಯಾಪಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!