spot_img
Sunday, February 15, 2026
spot_img

ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ವಿಳಂಬ : ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಕ್ರಮ ಕೈಗೊಳ್ಳುವಂತೆ ಡಿಸಿ ವಿದ್ಯಾಕುಮಾರಿ ಸೂಚನೆ

ಜನಪ್ರತಿನಿಧಿ (ಉಡುಪಿ ) :  ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ ವಹಸಿದ್ದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಕ್ರಮ ಕೈಗೊಳ್ಳಬೇಕು ಎಂದು ಇಂಜಿನೀಯರ್‌ ಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಸೂಚನೆ ನೀಡಿದ್ದಾರೆ.

ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉಡುಪಿ ಸಿಟಿಯಿಂದ ಮಣಿಪಾಲಕ್ಕೆ ಹೋಗುವ ರಸ್ತೆ ವಿಸ್ತರಣೆ ಕಾಮಗಾರಿಯ ಸಂದರ್ಭದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ರೈಲ್ವೇ ಇಲಾಖೆಯು ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕೆಂದು ಸೂಚನೆ ನೀಡಿದ ಕಾರಣ, ೨೦೧೮ನೇ ಸಾಲಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆ ಕಾಮಗಾರಿ ಆರಂಭವಾಗಿ ಐದು ವರ್ಷಗಳು ಕಳೆದರೂ ಪೂರ್ಣಗೊಳ್ಳದೇ ಸಾರ್ವಜನಿಕರ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿದೆ ಎಂದು ಹೇಳಿದರು.

ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಪ್ರತಿದಿನ ಕೇಳಿಬರುತ್ತಿವೆ. ಆದರೇ ಗುತ್ತಿಗೆದಾರರಿಗಳು ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಇರುವುದು ಇದಕ್ಕೆಲ್ಲಾ ಕಾರಣವಾಗಿದೆ. ಪ್ರಮುಖ ಗುತ್ತಿಗೆದಾರ ಹಾಗೂ ಉಪ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಬಂಧಪಟ್ಟವರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಕಳೆದ ಪ್ರಗರಿ ಪರಿಶೀಲನಾ ಸಭೆಯಲ್ಲಿ ಗುತ್ತಿಗೆದಾರರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನೀಯರ್‌ಗಳಿಗರ ರಾತ್ರಿ ಹಾಗೂ ಹಗಲು ಎರಡೂ ಪಾಳಿಯಲ್ಲಿ ಕಾರ್ಮಿಕರನ್ನು ನಿಯೋಜಿಸಿ, ಶೀಘರ ಪೂರ್ಣಗೊಳಿಸಲು ಸೂಚನೆ ನೀಡಲಾಗಿತ್ತು. ಆದಾಗ್ಯೂ, ಕೆಲವು ಮಂದಿ ಕಾರ್ಮಿಕರನ್ನು ಮಾತ್ರ ನಿಯೋಜಿಸಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಅವರು ವಿವರಿಸಿದರು.

ಇಂದ್ರಾಳಿ ರೈಲ್ವೇ ಮೇಲ್ಸೇತುವೆಯ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಯೋಜನೆ ರೂಪಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲಾ ಸಲಕರಣೆಗಳನ್ನು ನಿಯೋಜಿಸುವುದನ್ನು ಒಳಗೊಂಡು ಮತ್ತಿತರ ಪತ್ರ ವ್ಯವಹಾರವನ್ನು ಶೀಘ್ರವಾಗಿ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ. ಅರುಣ್‌  ಮಾತನಾಡಿ, ಕಾಮಗಾರಿ ನಿಧಾನಗತಿಉಯಿಂದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಕಿರಿಕಿರಿ ಉಂಟಾಗುವುದರ ಜೊತೆಗೆ ಅನೇಕ ರಸ್ತೆ ಅಪಘಾತಗಳು ಸಹ ಸಂಭವಿಸಿವೆ. ಇದೆಲ್ಲದಕ್ಕೂ ನಿರ್ಲಕ್ಷ್ಯದ ಕಾಮಗಾರಿ ಕೈಗೊಂಡಿರುವುದೇ ಕಾರಣವಾಗಿದೆ. ಅಫಘಾತ ಪ್ರಕರಣಗಳಲ್ಲಿಯೂ ಗುತ್ತಿಗೆದಾರರು, ಇಂಜಿನಿಯರ್‌ಗಳನ್ನು ಸೇರಿಸಿ, ಪ್ರಕರಣವನ್ನು ದಾಖಲಿಸಲಾಗುವುದು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!