spot_img
Wednesday, April 1, 2026
spot_img

ಎ.ಐ ಶಿಕ್ಷಣ ಕ್ಷೇತ್ರಕ್ಕೆ ವರದಾನ-ಆಶಾ ಶೆಟ್ಟಿ

ಶಂಕರನಾರಾಯಣ: ಕೃತಕ ಬುದ್ಧಿಮತ್ತೆ ಅಥವಾ ಎ‌ಐ ತಂತ್ರಜ್ಞಾನವು ಮಾನವನ ಬದುಕು ಮತ್ತು ಅಭಿವೃದ್ದಿಗೆ ವರದಾನವಾಗಿದೆ. ಎ.ಐ ಬಳಕೆ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸುತ್ತದೆ. ಅಧ್ಯಯನ, ಸಂಶೋಧನೆ ಮತ್ತು ಉದ್ಯೋಗಾವಕಾಶಗಳ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಶಿಕ್ಷಣ ಫೌಂಡೇಶನ್ ಬೆಂಗಳೂರು ಇದರ ತರಬೇತುದಾರರಾದ ಆಶಾ ಶೆಟ್ಟಿ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿ ಆಯೋಜಿಸಿದ್ದ ಎ‌ಐ ಕುರಿತ ಕೌಶಲ್ಯ ಅಭಿವೃದ್ಧಿ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಾರ್ಯಾಗಾರದ ಕುರಿತು ಎಂ.ಕಾಂ.ವಿದ್ಯಾರ್ಥಿಗಳಾದ ಶಶಾಂಕ್, ವಿಜಯಲಕ್ಷ್ಮಿ ಮತ್ತು ಪಲ್ಲವಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ತಮ್ಮ ಭಾಷಣದಲ್ಲಿ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಎ ಐ ಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸ್ನಾತಕೋತ್ತರ ವಿಭಾಗ ಸಂಯೋಜಕರಾದ ಕು.ಪ್ರಜ್ಞಾ ತರಬೇತಿ ಕಾರ್ಯಕ್ರಮ ಸಂಘಟಿಸಿ ಪ್ರಸ್ತಾವನೆಗೈದರು. ಉಪನ್ಯಾಸಕರಾದ ಸುಬ್ರಹ್ಮಣ್ಯ ಅಡಿಗ, ಶೈಲಜಾ ಮತ್ತು ರಾಜೇಂದ್ರ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!