spot_img
Saturday, May 16, 2026
spot_img

ಕುಂದಾಪುರ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ವಿ ಆಯ್ಕೆ

ಕುಂದಾಪುರ: ಕುಂದಾಪುರಪುರಸಭೆಯ ಮೂರನೇ ಅವಧಿಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಡಳಿತ ಪಕ್ಷದ ಸದಸ್ಯರಾದ ಪ್ರಭಾಕರ್ ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಕುಂದಾಪುರ ಪುರಸಭೆಯ ಸಭಾಂಗಣದಲ್ಲಿ ನಡೆಯಿತು. ಸ್ಥಾಯಿ ಸಮಿತಿಗೆ ವಿಪಕ್ಷದಿಂದ ಯಾರೂ ಸ್ಪರ್ಧಿಸದ ಕಾರಣ ಅವಿರೋಧವಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮೋಹನದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಎಸ್ ಬಿಲ್ಲವ, ಸದಸ್ಯರಾದ ಚಂದ್ರಶೇಖರ ಖಾರ್ವಿ, ರಾಘವೇಂದ್ರ ಖಾರ್ವಿ, ದೇವಕಿ ಸಣ್ಣಯ್ಯ, ಶ್ವೇತಾ ಸಂತೋಷ್, ಶೇಖರ ಪೂಜಾರಿ, ಅಶ್ಫಕ್ ಕೋಡಿ, ಸಂದೀಪ್ ಖಾರ್ವಿ, ಶ್ರೀಧರ್ ಶೇರೆಗಾರ್, ರೋಹಿಣಿ ಉದಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಪುರಸಭೆಯ ಮುಖ್ಯಾಧಿಕಾರಿ ಆನಂದ ಜೆ ಆಯ್ಕೆ ಪ್ರಕ್ರಿಯೆ ನಿರ್ವಹಿಸಿದರು. ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಭಾಕರ ವಿ ಅವರು ಕೃತಜ್ಞತೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!