spot_img
Wednesday, April 1, 2026
spot_img

ಎಚ್‌ಎಂಪಿವಿ | ಉಸಿರಾಟದ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ : ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ಜನಪ್ರತಿನಿಧಿ (ನವ ದೆಹಲಿ) : ಭಾರತದಲ್ಲಿ ಎಚ್‌ಎಂಪಿ ವೈರಸ್‌ ಪತ್ತೆಯಾದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಸಭೆ ನಡೆಸಿದ್ದು, ಉಸಿರಾಟದ ಸೋಂಕಿನ ಬಗ್ಗೆ ಜನರಲ್ಲಿ ಅಗತ್ಯವಾಗಿ ಜಾಗೃತಿ ಮೂಡಿಸುವಂತೆ ಹಾಗೂ ಹರಡುವಿಕೆಯ ಬಗ್ಗೆ ಎಚ್ಚರಿಕೆ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಅವರ ನೇತೃತ್ವದಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳೊಂದಿಗೆ ನಡೆದ ವರ್ಚುವಮಲ್‌ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಐಸಿಎಂಆರ್‌, ರಾಷ್ಟ್ರೀಯ ವೈರಾಲಜಿ ವಿಭಾಗದ ವೈದ್ಯರು ಸೇರಿ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ದೇಶದಲ್ಲಿ ಕರ್ನಾಟಕ, ತಮಿಳುನಾಡು, ಹಾಗೂ ಗುಜರಾತ್‌ ರಾಜ್ಯಗಳಲ್ಲಿ ಈವರೆಗೆ ಒಟ್ಟು ಐದು ಎಚ್‌ಎಂಪಿ ವೈರಸ್‌ ಪತ್ತೆಯಾಗಿವೆ. ಇದು ಎಲ್ಲಾ ವಯಸ್ಸಿನವರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಉಸಿರಾಟದ ಸೋಂಕಾಗಿದೆ. ಭಯ ಪಡುವ ಅವಶ್ಯಕತೆ ಇಲ್ಲ. ಸೋಂಕಿನ ಪ್ರಕರಣಗಳೂ ಅನಿಯಂತ್ರಿತವಾಗಿ ಏರಿಕೆಯಾಗುತ್ತಿಲ್ಲ. ಆದರೇ ಎಲ್ಲಾ ರಾಜ್ಯಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ, ಪರಿಸ್ಥಿತಿಯನ್ನು ಅವಲೋಕಿಸುವ ತುರ್ತಿದೆ ಎಂದು ಸಲಹೆ ನೀಡಿದೆ.

ಉಸಿರಾಟ ಸಂಬಂಧಿಸಿದಂತೆ ಸೋಂಕು ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆಯಾಗಿದೆ. ದೇಶವು ಯಾವುದೇ ಸಂಭಾವ್ಯ ಉಲ್ಬಣವನ್ನು ಎದರಿಸಲು ಸಿದ್ಧವಿದೆ ಎಂದು ಪುಣ್ಯ  ಪುಣ್ಯ ಸಲಿಲ ಶ್ರೀವಾಸ್ತವ ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Union Health Secretary reviews the present situation of respiratory illnesses in the country and the status of public health measures for its management.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!