spot_img
Wednesday, March 25, 2026
spot_img

ಕುಂದಾಪುರ ಗಾಂಧಿ ಮೈದಾನ ಸುಂದರೀಕರಣ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಭೇಟಿ

ಜನಪ್ರತಿನಿಧಿ ವಾರ್ತೆ( ಕುಂದಾಪುರ) ಕುಂದಾಪುರದ ಹೃದಯ ಭಾಗದಲ್ಲಿರುವ ಕುಂದಾಪುರ ಗಾಂಧಿ ಮೈದಾನ ಸುಂದರಿಕರಣಗೊಳಿಸುವ ನಿಟ್ಟಿನಲ್ಲಿ ಶಾಸಕರ ಮನವಿ ಮೇರೆಗೆ ಜ.೭ರಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿಯವರು ಭೇಟಿ ನೀಡಿದರು.

ಗಾಂಧಿ ಮೈದಾನ ಸುತ್ತ ಕಾಂಪೌಂಡ್ ವಾಲ್ ಕಟ್ಟುವುದು ಹಾಗೂ ವಾಲಿಬಾಲ್ ಕಬಡ್ಡಿ ಕೋರ್ಟ್ ರಚನೆಯ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಜಿಲ್ಲಾಧಿಕಾರಿಗಳ ಜೊತೆ ಸಮಗ್ರವಾಗಿ ಚರ್ಚೆ ನಡೆಸಿದರು. ಕುಂದಾಪುರ ತಾಲೂಕು ಕೇಂದ್ರದಲ್ಲಿ ಸಮರ್ಪಕವಾಗಿ ಇರುವುದು ಎರಡೇ ಮೈದಾನಗಳು. ಒಂದು ಗಾಂಧಿ ಮೈದಾನ, ಇನ್ನೊಂದು ನೆಹರೂ ಮೈದಾನ. ಗಾಂಧಿ ಮೈದಾನ ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆ ಆಧೀನದಲ್ಲಿದೆ. ಪುರಸಭೆ ನೆಹರು ಮೈದಾನವನ್ನು ಸ್ವಚ್ಛತೆ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಹಾಗೂ ಶಾಲಾ ಮಕ್ಕಳಿಗೆ ಪಠ್ಯೇತರ ಚಟುವಟಿಕೆ ನಡೆಸಲು ಅನುವು ಮಾಡಿಕೊಡುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕುಂದಾಪುರದ ಪುರಸಭಾ ವ್ಯಾಪ್ತಿಯಲ್ಲಿರುವ ಖಾರ್ವಿಕೇರಿ ಹಾಗೂ ಕೋಡಿ ಸಮುದ್ರದ ತೀರದಲ್ಲಿ ಹಲವಾರು ವರ್ಷಗಳಿಂದ ವಾಸ್ತವ್ಯ ಹೊಂದಿ ಹಕ್ಕು ಪತ್ರ ಹೊಂದದೇ ಇರುವ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಶಾಸಕರು ಚರ್ಚಿಸಿದರು.

ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಪುರಸಭೆಯ ಉಪಾಧ್ಯಕ್ಷೆ ವನಿತ ಎಸ್. ಬಿಲ್ಲವ, ಪುರಸಭಾ ಸದಸ್ಯ ಸಂತೋಷ್ ಶೆಟ್ಟಿ, ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಪುರಸಭಾ ಮುಖ್ಯ ಅಧಿಕಾರಿ ಆನಂದ್.ಜಿ. ಗುರುಪ್ರಸಾದ್, ಅಂಜನಿ ಗೌಡ, ಕಂದಾಯ ನಿರೀಕ್ಷಕ ದಿನೇಶ್ ಹುದ್ದಾರ, ಸುರೇಶ ಶೆಟ್ಟಿ ಗೋಪಾಡಿ, ಸುನಿಲ್ ಶೆಟ್ಟಿ ಹೇರಿಕುದ್ರು, ಪ್ರಕಾಶ್ ಖಾರ್ವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!