spot_img
Wednesday, April 1, 2026
spot_img

60% ಕಮೀಶನ್ ಆರೋಪ : ನಿಮ್ಮ ಲೂಟಿ ಸಾಕ್ಷಿಗುಡ್ಡೆ ನೋಡಿ ಇಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ.ಕೆ ತಿರುಗೇಟು

ಜನಪ್ರತಿನಿಧಿ (ನವದೆಹಲಿ) : ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮೀಶನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್ ಮಾಡಿ ಸರಕಾರದ ವಿರುದ್ಧ ಪರ್ಸಂಟೇಜ್ ದಾಳಿ ಮಾಡಿರುವ ಹೆಚ್‌ಡಿಕೆ ಇಲ್ಲಿದೆ ನೋಡಿ ನಿಮ್ಮ ಲೂಟಿ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಖಲೆ ಕೊಡಿ, ದಾಖಲೆ ಕೊಡಿ ಎನ್ನುತ್ತಿದ್ದೀರಿ. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..? ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.

ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ!! ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ. ಜಲ ಸಂಪನ್ಮೂಲ : ₹14,600 ಕೋಟಿ, ಲೋಕೋಪಯೋಗಿ: ₹10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ₹3,100 ಕೋಟಿ, ಸಣ್ಣ ನೀರಾವರಿ: ₹2,800 ಕೋಟಿ, ಇತರೆ ಇಲಾಖೆ: ₹1,500 ಕೋಟಿ ಸೇರಿ ಒಟ್ಟು: ₹32,000 ಕೋಟಿ ಬಾಕಿ ಇದೆ ಎಂದು ಸಚಿವರು ಹೇಳಿದ್ದಾರೆ.

ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ ಎಂದು ಸಿಎಂ ಮತ್ತು ಸಚಿವರಿಗೆ ಕೇಂದ್ರ ಸಚಿವರು ಕಿವಿಮಾತು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!