spot_img
Wednesday, April 1, 2026
spot_img

ಎಸ್‌ಸಿ, ಎಸ್‌ಟಿ ಸಭೆ ಸಹಿಸಲ್ಲವೆಂದು ಯಾರಾದರೂ ಹೇಳಿದರೆ ತಕ್ಕುದಾಗಿ ಉತ್ತರಿಸುವೆ : ಜಿ ಪರಮೇಶ್ವರ್‌

ಜನಪ್ರತಿನಿಧಿ (ಬೆಂಗಳೂರು) : ಎಸ್‌ಸಿ, ಎಸ್‌ಟಿ ಸಮಾವೇಶದ ಬಗ್ಗೆ ಚರ್ಚೆ ಮಾಡುವುದನ್ನು ಸಹಿಸುವುದಿಲ್ಲವೆಂದು ಯಾರೂ ನನಗೆ ಹೇಳಿಲ್ಲ. ಒಂದು ವೇಳೆ ಸಭೆ ಮಾಡಿದರೆ ಸಃಇಸುವುದಿಲ್ಲವೆಂದು ಯಾರಾದರು ಹೇಳಿದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಆ ಶಕ್ತಿ ನಮಗಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ವರದಿಗಾರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಆ ರೀತಿಯಾಗಿ ಯಾರಾದರು ಹೇಳಿದರೆ, ನಾವು ತಲೆ ಕೆಡಿಸಿಕೊಳ್ಳುವುದೂ ಒಲ್ಲ ಎಂದು ಹೇಳಿದರು.

ವಿಧಾನಸಭೆ ಚುನಾವನೆಗೂ ಮುನ್ನಾ ಚಿತ್ರದುರ್ಗದಲ್ಲಿ ಎಸ್‌ಸಿ, ಎಸ್‌ಟಿ ಸಮಾವೇಶ ಮಾಡಲಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದರೇ ಅನೇಕ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿಕೊಂಡಿದ್ದೇವು. ಚಿತ್ರದುರ್ಗ ನಿರ್ಣಯ ಎಂದು ಹೆಸರು ಕೊಟ್ಟಯ ಬೇಡಿಕೆಗಳನ್ನು ಇಟ್ಟಿದ್ದೇವು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂತು. ಅನೇಕ ಭರವಸೆಗಳನ್ನು ಈಡೇರಿಸುವ ಕೆಲಸಗಳನ್ನು ಸರ್ಕಾರ ಮಾಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ಪೋಸ್ಟ್‌ ಮ್ಯಾಟ್ರಿಕ್‌ ಸ್ಕಾಲರ್‌ಶಿಪ್‌ ಬರುತ್ತಿಲ್ಲ. ಕೇಂದ್ರದಿಂದ ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನದ ಪಾಲು ಕೂಡ ರಾಜ್ಯಕ್ಕೆ ಬರುತ್ತಿಲ್ಲ. ಎಲ್ಲವನ್ನು ಚರ್ಚೆ ಮಾಡಬೇಕಿದೆ. ಒಗ್ಗಟ್ಟಾಗಿ ಸಮಸ್ಯೆಗಳನ್ನು ಬಗೆಹರಸಬೇಕು. ಈ ನಿಟ್ಟಿನಲ್ಲಿ ಸಭೆ ಸೇರಿಸಲು ತೀರ್ಮಾನಿಸಲಾಗಿತ್ತು. ಈ ವಿಚಾರವನ್ನು ದೆಹಲಿ ನಾಯಕರ ಗಮನಕ್ಕೆ ತಂದಿರಲಿಲ್ಲ.

ನಮ್ಮದೆ ಆಂತರಿಕ ವಿಚಾರ ಆಗಿರುವುದರಿಂದ ಹೇಳುವ ಅವಶ್ಯಕತೆ ಇಲ್ಲ ಎಂಬ ಕಾರಣದಿಂದ ಹೇಳಿರಲಿಲ್ಲ. ಪಕ್ಷದ ವಿಚಾರಗಳು ಹಾಗೂ ಸರ್ಕಾರದ ತೀರ್ಮಾನಗಳು ನಡೆದಾಗ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ಗಮನಕ್ಕೆ ಹೋಗುತ್ತದೆ. ಸುರ್ಜೆವಾಲ ಅವರು ನನಗೆ ಕರೆ ಮಾಡಿ ಸಮಾವೇಶದಲ್ಲಿ ನಾನು ಭಾಗವಿಸಬೇಕು ಎಂದರು. ರಾಜಕೀಯ ಪ್ರೇರಿತ ಅಥವಾ ರಾಜಕೀಯಕ್ಕಾಗಿ ಮಾಡುತ್ತಿರುವ ಸಮಾವೇಶ ಅಲ್ಲ. ನೀವು ಭಾಗವಹಿಸುವಂತೆ ಆಹ್ವಾನಿಸಿದೆ. ಈಗ ಆಗುವುದಿಲ್ಲ. ಮುಂದೆ ಸಮಯ ನೀಡುತ್ತೇನೆ. ಆಗ ಸಮಾವೇಶ ಮಾಡಿಉ ಭಾಗವಹಿಸುತ್ತೇನೆ ಎಂದು ಸುರ್ಜೇವಾಲಾ ಅವರು ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದರಿಂದ ಮುಂದೂಡಿದ್ದೇವೆ. ಸಮಾವೇಶ ಏರ್ಪಡಿಸುತ್ತಿರುವುದರಿಂದ ರದ್ದು ಮಾಡಿಲ್ಲ. ಅವರ ಸಮಯ ತೆಗೆದುಕೊಂಡು ಚರೆಚ ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

ಡಿನ್ನರ್‌ ಬಗ್ಗೆ ಏನೇನೋ ವ್ಯಾಖ್ಯಾನವಾಗುತ್ತಿದೆ. ಡಿನ್ನರ್‌ ಅಂದರೇ ಊಟ. ಏಳು ಗಂಟಗೆ ಸಭೆ ಕರೆಯಲಾಗಿತ್ತು. ಎರಡು ಮೂರು ತಾಸು ಸಭೆ ನಡೆದಿತ್ತು. ಸಭೆ ಮುಗಿದ ಬಳಿಕ ನಿಮ್ಮ ಮನೆಗೆ ಹೋಗಿ ಊಟ ಮಾಡಿ ಎಂದು ಹೇಳುಬ ಬದಲು, ಊಟ ಏರ್ಪಾಡು ಮಾಡಲಾಗಿತ್ತು ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!