spot_img
Wednesday, April 1, 2026
spot_img

ಇಂದಿನ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳ ಮನದ ಬಾಗಿಲಿಗೆ ಹಾಕಿದ ತಡೆಗಳನ್ನು ದಾಟಲು ಕಲಿಸುತ್ತಿಲ್ಲ : ಪ್ರೊ. ಕೊಕ್ಕರ್ಣೆ

ಜನಪ್ರತಿನಿಧಿ (ಬ್ರಹ್ಮಾವರ) : ಇಂದಿನ ನಮ್ಮ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳ ಮನದ ಬಾಗಿಲಿಗೆ ಹಾಕಿದ ತಡೆಗಳನ್ನು ದಾಟಲು ಕಲಿಸುತ್ತಿಲ್ಲ. ಈ ತಡೆಗಳೆಂದರೆ ವಿಶ್ವಾಸದ ಕೊರತೆ, ಕೀಳರಿಮೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದ ಕೊರತೆ, ಇಚ್ಛಾ ಶಕ್ತಿಯ ಕೊರತೆ, ಕೌಶಲಾ ಶಕ್ತಿಯ ಕೊರತೆ, ಸಂವಹನ ಸಾಮರ್ಥ್ಯದ ಕೊರತೆ. ನಾವು  ಅಂಕಗಳಿಕೆಗೆಯ ಜೊತೆಗೆ  ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ  ಬೆಳವಣಿಗೆ ಬೇಕಾದ ಪೂರಕ ಶಿಕ್ಷಣ ನೀಡುವಲ್ಲಿ  ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೇೂತ್ಸಾಹಿಸ ಬೇಕಾದ ಅಗತ್ಯತೆ ಇದೆ ಎಂದು ಅಂಕಣಕಾರ, ನಿವೃತ್ತ ಉಪನ್ಯಾಸಕ ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಚೇಕಾ೯ಡಿ ಶಾರದಾ ಆಂಗ್ಲ ಮಾಧ್ಯಮ ಶಾಲಾ ವಾಷಿ೯ಕೇೂತ್ಸವ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಬಿ. ಮಹಾಬಲೇಶ್ವರ ಉಡುಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚೇರ್ಕಾಡಿ ಶಾರದಾ ಹೈಸ್ಕೂಲು ಮುಖ್ಯಸ್ಥರಾದ ಸಿ. ಮಂಜುನಾಥ್ ನಾಯ್ಕ ಭಾಗವಹಿಸಿ ಮಾತನಾಡಿದರು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್.ಸುದಶ೯ನ ಹೆಗ್ಡೆ ಸ್ವಾಗತಿಸಿ ಪ್ರಾಸ್ತಾವನೆಗೈದರು.

ಸಮಿತಿಯ ಕೇೂಶಾಧಿಕಾರಿ ಶಶಿಧರ್ ಶೆಟ್ಟಿ, ಆಡಳಿತಾಧಿಕಾರಿ ದಿನಕರ್ ಆರ್.ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೇೂಪಾಧ್ಯಾಯಿನಿ ಚೈತ್ರಾ ಎಂ.ಶೆಟ್ಟಿ ಶಾಲಾ ವರದಿ ವಾಚಿಸಿದರು. ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಆರೂರು ತಿಮ್ಮಪ್ಪ ಶೆಟ್ಟಿ ವಂದಿಸಿದರು. ವಿವಿಧ ಚಟುವಟಿಕೆಗಳಲ್ಲಿ  ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.

ಯಕ್ಷಗಾನ ರಂಗದಲ್ಲಿ ವಿಶೇಷ ಸಾಧನಗೈದ ಪ್ರಶಸ್ತಿ ಪುರಸ್ಕೃತ  ಚೇರ್ಕಾಡಿ ಮಂಜುನಾಥ ಪ್ರಭು ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!