spot_img
Sunday, February 15, 2026
spot_img

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸರ್ಕಾರ ಸಹಿಸಲ್ಲ : ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನ್

ಜನಪ್ರತಿನಿಧಿ (ಬೆಂಗಳೂರು) : ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ. ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ನಗರದ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ನ ನೂತನ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಬಳಿಕ ಪುಲಕೇಶಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹಗಳ ಸಮುಚ್ಛಯವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು. ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ ಎಂದರು.

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಪೇದೆಗಳು, ಎಸ್.ಐ ಗಳು, ಇನ್ಸ್‌ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!