spot_img
Wednesday, April 1, 2026
spot_img

ನಕ್ಸಲರ ಶರಣಾಗತಿ : ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ಮೋಸ ಮಾಡಿ ಜೇಬು ತುಂಬಿಕೊಂಡವರಲ್ಲ : ಶಾಸಕ ಸುನೀಲ್‌ಗೆ ಸಿಎಂ ತಿರುಗೇಟು !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಛತ್ತೀಸ್‌ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ? ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಅವರಿಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದು ತಿರುಗೇಟು ನೀಡಿದರು.

ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ, ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸಿ, ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ ಎಂದು ಹೇಳಿದರು.

ನಿನ್ನೆ(ಬುಧವಾರ) ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜ ವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ. ಸುನೀಲ್ ಕುಮಾರ್‌ ಹೇಳಿದ್ದಲ್ಲದೇ, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!