spot_img
Wednesday, April 1, 2026
spot_img

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಜನವರಿ 21ಕ್ಕೆ ನಿಗದಿ | ರಾಷ್ಟ್ರೀಯ ನಾಯಕರು ಉಪಸ್ಥಿತಿ : ಡಿಸಿಎಂ ಡಿಕೆಶಿ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಪ್ರಧಾನಿ ಶ್ರೀ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಜನವರಿ 21ರಂದು ನಡೆಸಲು ನಿರ್ಧರಿಸಲಾಗಿದೆ. ಎಐಸಿಸಿ ವತಿಯಿಂದ ನಡೆಯಲಿರುವ ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇವೆ. ಈ ಸಮಾವೇಶದ ಮೂಲಕ “ಗಾಂಧಿ ಭಾರತ” ಕಾರ್ಯಕ್ರಮವನ್ನು ಮುಂದುವರೆಸುವಂತಹ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರು ಬರುವ ಬಗ್ಗೆ ನಾವು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿಸಿಎಂ ಮಾತನಾಡಿದರು.

ಜನವರಿ 13 ರಂದು ಈ ಕುರಿತು ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕೆಪಿಸಿಸಿ ಸದಸ್ಯರು, ಶಾಸಕರು, ಸಚಿವರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಎಲ್ಲರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ಪದಾಧಿಕಾರಿಗಳ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಲಿದೆ. ಇದಲ್ಲದೆ ಜನವರಿ 15 ಹಾಗೂ 16 ರಂದು ಸಚಿವರು, ಶಾಸಕರು, ಮುಖಂಡರು, ಮಾಜಿ ಶಾಸಕರು, ಮಾಜಿ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ವಭಾವಿ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮದಡಿ ನಡೆಯುವ ಸಮಾವೇಶದಲ್ಲಿ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಚಾರಿತ್ರಿಕ ಹಿನ್ನೆಲೆಯುಳ್ಳ ಪುಸ್ತಕವನ್ನು ಕೆಪಿಸಿಸಿ ವತಿಯಿಂದ ಬಿಡುಗಡೆ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ಪಕ್ಷದ ಎಲ್ಲರೂ ಭಾಗಿಯಾಗಲಿದ್ದು, ಗಾಂಧೀಜಿ ಅವರ ತತ್ವಗಳನ್ನು ಉಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!