spot_img
Tuesday, March 31, 2026
spot_img

ತಿರುಪತಿ ಕಾಲ್ತುಳಿತ ಪ್ರಕರಣ : ಆಂಧ್ರ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಜನಪ್ರತಿನಿಧಿ (ತಿರುಪತಿ ) : ಇಲ್ಲಿ ನಿನ್ನೆ(ಬುಧವಾರ) ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಮಂದಿ ಭಕ್ತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಧನ ನೀಡಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರದ ಮುಜರಾಯಿ ಇಲಾಖೆಯ ಸಚಿವ ಅಂಗನಿ ಸತ್ಯ  ಪ್ರಸಾದ್‌ ಹೇಳಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಘಟನೆ ತುಂಬಾ ದುಃಖ ನೀಡಿದೆ. ಹೋದ ಜೀವವವನ್ನು ಮರಳಿ ಪಡೆಯುವುದಕ್ಕೆ ಸಾಧ್ಯವಿಲ್ಲ. ಆದರೇ ಕುಟುಂಬಕ್ಕೆ ನೆರವಾಗಬಹುದು. ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ಮೊತ್ತವನ್ನು ಸರ್ಕಾರದಿಂದ ಶೀಘ್ರದಲ್ಲೇ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ನಿನ್ನೆ ರಾತ್ರಿ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ದುರಂತಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಸಚಿವರು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದರು.

We are planning to give Rs 25 lakh to the family of the people who have been deceased : Minister Angani Satya Prasad

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!