Thursday, November 21, 2024

ವಂಡ್ಸೆ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಶಾಲೆಯ ಎಲ್ಲ ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಆಚರಣೆ

 

 

ಕುಂದಾಪುರ, ಸೆ.5: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ವಂಡ್ಸೆ, ಶಾಲಾಭಿವೃದ್ದಿ ಸಮಿತಿ ವಂಡ್ಸೆ, ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‍ನ ಕಾರ್ಯದರ್ಶಿ ಉದಯಕುಮಾರ ಶೆಟ್ಟಿ, ಉಡುಪಿ ಜಿಲ್ಲೆಯಲ್ಲಿ ಪ್ರಥಮವಾಗಿ ಸರ್ಕಾರಿ ಶಾಲೆಯಲ್ಲಿ 1ನೇ ತರಗತಿ ಆಂಗ್ಲಮಾಧ್ಯಮ ವಿಭಾಗವನ್ನು ಆರಂಭಿಸಿದ ಹೆಗ್ಗಳಿಕೆ ಈ ಶಾಲೆಗಿದೆ. 2016ರಲ್ಲಿ 89 ವಿದ್ಯಾರ್ಥಿಗಳಿದ್ದ ಈ ಶಾಲೆಯಲ್ಲಿ ಈಗ 364 ವಿದ್ಯಾರ್ಥಿಗಳಿದ್ದಾರೆ. ಕ್ಷಿಪ್ರ ಅವಧಿಯಲ್ಲಿ ಶಾಲೆ ಈ ಹಂತಕ್ಕೆ ಬರಲು ಶಿಕ್ಷಕರ ಪಾತ್ರವೂ ಗಮನಾರ್ಹವಾಗಿದೆ. ಶಿಕ್ಷಕ ವೃಂದದ ಸಮರ್ಪಣಾ ಭಾವದ ಸೇವೆ ಶಿಕ್ಷಕರ ದಿನಾಚರಣೆ ಸಂದರ್ಭ ಗುರುತಿಸಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‍ನ ಕೋಶಾಧಿಕಾರಿ ಜಿ.ಶ್ರೀಧರ ಶೆಟ್ಟಿ ಮಾತನಾಡಿ, ಶಿಕ್ಷಕರ ದಿನಾಚರಣೆ ಆಯಾ ಶಾಲೆಗಳಲ್ಲಿ ಪೋಷಕರು, ವಿದ್ಯಾರ್ಥಿಗಳ ಜೊತೆಗೆ ಆಚರಿಸುವುದು ಅರ್ಥಪೂರ್ಣ. ಈ ಸರ್ಕಾರಿ ಶಾಲೆ ಎಲ್ಲರೂ ಗುರುತಿಸುವ ಮಟ್ಟದಲ್ಲಿ ಬದಲಾವಣೆ ಕಂಡಿದೆ. ಇನ್ನಷ್ಟು ಎತ್ತರಕ್ಕೆ ಈ ಸಂಸ್ಥೆ ಬೆಳೆಯಲಿ ಎಂದರು.

ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಸದಸ್ಯ ತೊಂಬತ್ತು ಸೀತಾರಾಮ ಶೆಟ್ಟಿ, ಸಿ.ಆರ್.ಪಿ ನಾಗರಾಜ ಶೆಟ್ಟಿ, ಎ.ಪಿ.ಎಂ.ಸಿ ಸದಸ್ಯ ಸಂಜೀವ ಪೂಜಾರಿ ವಂಡ್ಸೆ ಉಪಸ್ಥಿತರಿದ್ದರು.

ಭಾರತ ರತ್ನ, ಡಾ|ಎಸ್.ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ್, ಸಹಶಿಕ್ಷಕರಾದ ಆಶಾ, ಸದಾಶಿವ, ರೇವತಿ, ರವಿಚಂದ್ರ , ಭಾರತಿ, ದೈಹಿಕ ಶಿಕ್ಷಕ ಶಿಕ್ಷಕ ರಾಜು ಎನ್., ಗೌರವ ಶಿಕ್ಷಕರಾದ ಭಾರತಿ, ಪೂಜಾ, ಚಿತ್ರಾ, ಶೈಲಶ್ರೀ, ವಿದ್ಯಾರಾಣಿ, ಶಿಕ್ಷಕೇತರ ಸಿಬ್ಬಂದಿ ಪ್ರೇಮಾ ಅವರಿಗೆ ಫಲ-ಪುಷ್ಪ, ಹಾರ, ಸ್ಮರಣಿಕೆ, ಸನ್ಮಾನ ಪತ್ರ ಹಾಗೂ ಐಡಿ ಕಾಡ್ ್ ನೀಡುವ ಮೂಲಕ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ ಅವರು, ಶಾಲೆಯ ಸರ್ವಾಂಗೀಣ ಪ್ರಗತಿಯಲ್ಲಿ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಮತ್ತು ಎಸ್.ಡಿ.ಎಂ.ಸಿ., ಹಳೆ ವಿದ್ಯಾರ್ಥಿ ಸಂಘ ಮತ್ತು ಶಾಲೆ ಹಾಕಿಕೊಂಡ 2 ಕೋಟಿ ವೆಚ್ಚದ ಯೋಜನೆಯನ್ನು ಪೂರ್ಣಗೊಳಿಸುವುದರ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ವೃದ್ದಿಸಿಕೊಂಡು ಪೋಷಕರಿಗೆ ತೃಪ್ತಿ ಪಡಿಸುವ ಉದ್ದೇಶವನ್ನು ಹೊಂದಿದೆ. ಆ ಮೂಲಕ ಶಾಲೆಯ ಹೆಸರನ್ನು ಜಿಲ್ಲೆ ರಾಜ್ಯ ಮಟ್ಟದಲ್ಲಿ ನಿರೂಪಿಸಲು ಗುರಿ ಹಾಕಿಕೊಳ್ಳಲಾಗಿದೆ ಎಂದರು.

ಸಹ ಶಿಕ್ಷಕಿ ಆಶಾ, ದೈ.ಶಿ.ಶಿಕ್ಷಕ ರಾಜು ಎನ್., ಗೌರವ ಶಿಕ್ಷಕಿ ಭಾರತಿ ಅನಿಸಿಕೆ ಹಂಚಿಕೊಂಡರು. ಶಾಲಾಭಿವೃದ್ದಿ ಸಮಿತಿ ವತಿಯಿಂದ ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು. ಗೋವರ್ಧನ್ ಜೋಗಿ ಶುಭ ಹಾರೈಸಿದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಂಜುನಾಥ ಎ.ಜಿ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ವಂದಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸುಮತಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!