spot_img
Monday, March 16, 2026
spot_img

ಎಕ್ಸಲೆಂಟ್‌ ಕಾಲೇಜು : ಎಸ್‌.ಎಸ್‌.ಎಲ್‌. ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಜನಪ್ರತಿನಿಧಿ (ಕುಂದಾಪುರ) : ಎಸ್‌.ಎಸ್‌.ಎಲ್‌. ಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಿ, ಫಲಿತಾಂಶ ಉತ್ತಮ ಪಡಿಸಲು ಈ ಪ್ರೇರಣಾ ಶಿಬಿರ ಸಹಾಯ ಮಾಡಲಿ ಎಂದು ಎಂದು ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಅರುಣ್ ಕುಮಾರ್ ಹೆಗ್ಡೆ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಹಾಗೂ ಹೈಸ್ಕೂಲ್ ಸುಣ್ಣಾರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ  ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಕಾರ್ಯಕ್ರಮವೊಂದನ್ನು ತಮ್ಮ ಸಂಸ್ಥೆಯಲ್ಲಿ ಯಶಸ್ವಿಯಾಗಿ, ಅದ್ದೂರಿಯಾಗಿ ಆಯೋಜಿಸುವುದಕ್ಕೆ ಎಂ ಮಹೇಶ್ ಹೆಗ್ಡೆ ಅಂತಹ ಸಮರ್ಥ ಆಡಳಿತಗಾರರ ನೇತೃತ್ವದಲ್ಲಿರುವ ಎಕ್ಸಲೆಂಟ್ ಸಂಸ್ಥೆಯಲ್ಲಿ ಮಾತ್ರ ಸಾಧ್ಯ. ಮಕ್ಕಳ ಕಠಿಣ ಶ್ರಮಕ್ಕೆ ಈ ಶಿಬಿರ ಸುಲಭ ಮಾರ್ಗ ಕಲ್ಪಿಸುವಂತಾಗಲಿ ಎಂದವರು ಹಾರೈಸಿದರು.

ಉಡುಪಿ ಜಿಲ್ಲೆ ಪ್ರೌಡಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಹೆಗ್ಡೆ ಮಾತನಾಡಿ, ಪ್ರೇರಣಾ ಶಿಬಿರ ವಿದ್ಯಾರ್ಥಿಗಳ ಪಾಲಿಗೆ ಪ್ರೇರಕ ಶಕ್ತಿ. ಬದುಕನ್ನು ಬದಲಿಸುವ ಪ್ರೇರಣೆ ಈ ಶಿಬಿರದಿಂದಾಗಲಿ ಎಂದು ಅವರು ಹೇಳಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದ ಎಂ ಎಂ ಹೆಗ್ಡೆ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ಕುಂದಾಪುರ ಇದರ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಈ ಶಿಬಿರ ವಿದ್ಯಾರ್ಥಿಗಳ ಪ್ರಯತ್ನವನ್ನು ಉತ್ತೇಜಿಸುವ ಚಿಮ್ಮು ಹಲಗೆಯಂತೆ. ವಿದ್ಯಾರ್ಥಿಗಳು ಈ ಶಿಬಿರದ ಸಂಪೂರ್ಣ ಪ್ರಯೋಜನೆ ಪಡೆದರೆ ಎನ್ನುವ ದೃಷ್ಟಿಯಲ್ಲಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಈ ಶಿಬಿರ ಯಶಸ್ವಿಯಾಗುತ್ತದೆ. ನಿಮ್ಮ ಬದುಕನ್ನು ಈ ಶಿಬಿರ ಯಶಸ್ಸಿನ ದಾರಿಗೆ ಕೊಂಡೊಯ್ಯುವಂತೆ ಆಗಲಿ ಎಂದು ಶುಭ ಹಾರೈಸಿದರು.

ಕುಂದಾಪುರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶೋಭಾ ಎಸ್ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು.

ತಾಲೂಕು ಪ್ರೌಢಶಾಲ ಮುಖ್ಯೋಪಾಧ್ಯಾಯರಾದ ಸಂಘದ ಅಧ್ಯಕ್ಷ ಅಬ್ದುಲ್ ರವುಫ್, ಉದಯ್ ಕುಮಾರ್ ಶೆಟ್ಟಿ, ಸಂಪನ್ಮೂಲ ವ್ಯಕ್ತಿಗಳಾದ ಪ್ರೇಕರ ಬಾಷಣಕಾರ,ಲೇಖಕ ಸಿ.ಎ ಗೋಪಾಲಕೃಷ್ಣ ಭಟ್‌, ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಕೋಟೇಶ್ವರದ ಉಪ ಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಬಂಟ್ವಾಡಿ ಉಪಸ್ಥಿತರಿದ್ದರು.

ಎಕ್ಸಲೆಂಟ್ ಹೈಸ್ಕೂಲ್ ನ ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ. ಆಚಾರ್ಯ ಧನ್ಯವಾದ ಸಮರ್ಪಿಸಿದರು.

ತಾಲೂಕಿನ ಬೇರೆ ಬೇರೆ ಪ್ರೌಢ ಶಾಲೆಗಳ ಎಸ್‌.ಎಸ್‌.ಎಲ್‌. ಸಿ ವಿದ್ಯಾರ್ಥಿಗಳು ಭಾಗವಹಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ಸಿ.ಎ ಗೋಪಾಲಕೃಷ್ಣ, ಹಾಗೂ ಚಂದ್ರಶೇಖರ ಶೆಟ್ಟಿ ಬಂಟ್ವಾಡಿ ಶಿಬಿರ ನಡೆಸಿಕೊಟ್ಟರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!