spot_img
Monday, March 16, 2026
spot_img

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯನ್ನು ಬಂಧಿಸಿದ ಪೊಲೀಸರು

ಜನಪ್ರತಿನಿಧಿ (ಮಂಗಳೂರು) : ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ಮಂಗಳೂರಿನ ಗ್ರಾಮವೊಂದರಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು 25 ವರ್ಷದ ಅನುರುಲ್ ಶೇಕ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಮುಕ್ಕ ಗ್ರಾಮದಲ್ಲಿ ಶೇಕ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಸುಳಿವಿನ ಆಧಾರದ ಮೇಲೆ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ಮಂಗಳೂರು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗೆ ಇಳಿದು ಆರೋಪಿಯನ್ನು ಬಂಧಿಸಲಾಗಿದೆ ತಿಳಿದು ಬಂದಿದೆ.

ಆರೋಪಿ ಮೂರು ವರ್ಷಗಳ ಹಿಂದೆ ಲಾಲ್ಗೋಲ್ ಗಡಿ (ಪೂರ್ವ ಪಶ್ಚಿಮ ಬಂಗಾಳ) ಪ್ರದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ವಿಷಯ ಲಭ್ಯವಾಗಿದೆ.

ಆರೋಪಿಯು ಮಂಗಳೂರಿಗೆ ಬಂದು ಕಟ್ಟಡ ಕಾರ್ಮಿಕನಾಗಿ ನೆಲೆಸಿದ್ದ. ಆರಂಭದಲ್ಲಿ ಆತ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ಗೆ ಬಂದು ನಂತರ ಮಂಗಳೂರಿಗೆ ಬಂದು ನೆಲೆಸಿದ್ದ ಎಂದು ಹೇಳಲಾಗಿದೆ.

ಇನ್ನು, ಗೃಹ ಸಚಿವ ಜಿ ಪರಮೇಶ್ವರ ಅವರು ಇತ್ತೀಚೆಗೆ ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಪರಿಷತ್ತಿನಲ್ಲಿ, ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ 159 ಬಾಂಗ್ಲಾದೇಶ ಪ್ರಜೆಗಳು ಮತ್ತು 24 ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಾಂಗ್ಲಾದೇಶದಿಂದ 115 ಅಕ್ರಮ ವಲಸಿಗರು ಕರ್ನಾಟಕದಲ್ಲಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿಕೆ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!