spot_img
Tuesday, March 17, 2026
spot_img

ಮುಂದುವರಿದ ʼಆಶಾʼ ಪ್ರತಿಭಟನೆ | ಸಿಎಂ ಮಧ್ಯಪ್ರವೇಶಕ್ಕೆ ಆಶಾ ಕಾರ್ಯಕರ್ತರ ಬಿಗಿ ಪಟ್ಟು !

ಜನಪ್ರತಿನಿಧಿ (ಬೆಂಗಳೂರು) : ಮಾಸಿಕ 15,000 ರೂ. ಗೌರವಧನ ಹಾಗೂ ಇತರ ಸವಲತ್ತುಗಳಿಗಾಗಿ ಆಗ್ರಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ಪ್ರತಿನಿಧಿಗಳ ಜತೆಗೆ ಇಂದು(ಶುಕ್ರವಾರ) ಬೆಳಿಗ್ಗೆ ನಡೆದ ಮತ್ತೊಂದು ಮಾತುಕತೆಯೂ ವ್ಯರ್ಥವಾಗಿದೆ. ಮುಖ್ಯಮಂತ್ರಿಯ ಮಧ್ಯಪ್ರವೇಶಕ್ಕೆ ಒತ್ತಾಯಿಸಿರುವ ಧರಣಿ ನಿರತರು, ಸಂಕ್ರಾಂತಿಯನ್ನೂ ಇಲ್ಲೇ ಆಚರಿಸುವುದಾಗಿ ಪಣ ತೊಟ್ಟರು.

ಮಂಗಳವಾರದಿಂದ ಆರಂಭವಾಗಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಯ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ಪ್ರತಿಭಟನಾ ನಿರತರ ಪ್ರತಿನಿಧಿಗಳ ಜತೆಗೆ ಶುಕ್ರವಾರ ಬೆಳಿಗ್ಗೆಯೇ ಸಭೆ ನಡೆಸಿದರು. ಆದರೆ ಬೇಡಿಕೆ ಈಡೇರಿಕೆ ಸಂಬಂಧ ಒಮ್ಮತಕ್ಕೆ ಬರಲು ಆಗದೇ ಇದ್ದ ಕಾರಣಕ್ಕೆ ಮಾತುಕತೆ ಮುರಿದುಬಿತ್ತು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಮಾಧ್ಯಮಗಳಿಗೆ ಪ್ರತಿಕ್ರಿಯಸಿ, ‘ಬುಧವಾರ ಹಾಗೂ ಗುರುವಾರ ನಡೆದ ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಕ್ಕಿಂತ ಭಿನ್ನವಾದ ನಿಲುವನ್ನು ಅಧಿಕಾರಿಗಳು ಪ್ರದರ್ಶಿಸಿದರು. ಆಶಾ ಕಾರ್ಯಕರ್ತೆಯರ ಅವಶ್ಯಕತೆಯೇ ಇಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿಯೇ ಎಲ್ಲವನ್ನೂ ನಿಭಾಯಿಸುತ್ತಾರೆ ಎಂಬ ಅಭಿಪ್ರಾಯ ಸರ್ಕಾರದ ಕಡೆಯಿಂದ ವ್ಯಕ್ತವಾಯಿತು. ಹೀಗಾಗಿಯೇ ಮಾತುಕತೆ ವ್ಯರ್ಥವಾಯಿತು ಎಂದು ಅವರು ಹೇಳಿದರು.

ಧರಣಿ ನಿರತರನ್ನು ಕುರಿತು ಮಾತನಾಡಿದ ಅವರು, ‘ಅಧಿಕಾರಿಗಳು ನಿಮ್ಮೊಂದಿಗೆ ಸಭೆ ನಡೆಸಿದಾಗ ಯಾವ ಸಮಸ್ಯೆಯನ್ನೂ ಹೇಳಿಕೊಳ್ಳುವುದಿಲ್ಲ. ಆದರೆ ಈಗ ಸುಮ್ಮನೆ ಪ್ರತಿಭಟನೆ ಮಾಡುತ್ತೀದ್ದೀರ ಎಂದು ಹೇಳಿದರು’ ಎಂದರು.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಆಶಾ ಕಾರ್ಯಕರ್ತರು, ‘ಸಭೆಗಳಲ್ಲಿ ಮಾತನಾಡಲು ಅವಕಾಶವನ್ನೇ ನೀಡುವುದಿಲ್ಲ. ಇನ್ನು ಸಮಸ್ಯೆ ಹೇಳಿಕೊಳ್ಳುವುದೆಲ್ಲಿ? ಎಲ್ಲ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳೂ ಬರಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಬರಲಿ. ಎಲ್ಲ ಸಮಸ್ಯೆಯನ್ನು ಅವರ ಎದುರೇ ತೆರೆದಿಡುತ್ತೇವೆ’ ಎಂದು ಆಕ್ರೋಶ ಹೊರ ಹಾಕಿದರು.

‘ಆರೋಗ್ಯ ಸಚಿವರೂ ಬಂದದ್ದಾಯಿತು, ಅಧಿಕಾರಿಗಳ ಜತೆಗೆ ಎರಡು ಸುತ್ತಿನ ಮಾತುಕತೆಯೂ ಮುರಿದುಬಿತ್ತು. ಸಮಸ್ಯೆ ಬಗೆಹರಿದಿಲ್ಲ. ಇನ್ನು ಮುಖ್ಯಮಂತ್ರಿ ಅವರೇ ಬರಲಿ, ಅವರಿಂದಷ್ಟೇ ಸಮಸ್ಯೆ ಬಗೆಹರಿಸಲು ಸಾಧ್ಯ’ ಎಂದು ಪ್ರತಿಭಟನಾ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!