spot_img
Tuesday, May 19, 2026
spot_img

ಮೀನುಗಾರಿಕೆ ಸಂದರ್ಭ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ನಾರಾಯಣ ಮೊಗವೀರ ಮನೆಗೆ ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ನಿಯೋಗ ಭೇಟಿ

ಜನಪ್ರತಿನಿಧಿ ವಾರ್ತೆ (ಕುಂದಾಪುರ) ಜ.2ರಂದು ಸಂಜೆ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭ ಬೋಟ್ ನಿಂದ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಗಂಗೊಳ್ಳಿ ಲೈಟ್ ಹೌಸ್ ನಿವಾಸಿ ನಾರಾಯಣ ಮೊಗವೀರ (58ವ) ಅವರ ಮನೆಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ, ಧೈರ್ಯ ತುಂಬಿದರು.

ಮೀನುಗಾರಿಕೆಯ ವೇಳೆ ನಾರಾಯಣ ಮೊಗವೀರರು ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿ 7 ದಿನಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಪತ್ತೆಕಾರ್ಯ ಚುರುಕುಗೊಳಿಸುವಂತೆ, ಮೀನುಗಾರರ ಮುಖಂಡರಾದ ಡಾ.ಜಿ.ಶಂಕರ್ ಮಾರ್ಗದರ್ಶನ ಪಡೆದುಕೊಂಡು ಮೊಗವೀರ ಮಹಾಜನ ಸೇವಾ ಸಂಘವು, ಮೀನುಗಾರಿಕಾ ಇಲಾಖೆ, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳಿಗೆ ಮೊಗವೀರ ಮಹಾಜನ ಸಂಘವು ಈಗಾಗಲೇ ಮನವಿ ಮಾಡಿದೆ. ಮೀನುಗಾರಿಕಾ ಸಚಿವರಿಗೂ ಮನವಿ ಮಾಡಲಾಗಿದ್ದು ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡುವ ಬಗ್ಗೆ ಒತ್ತಾಯ ಮಾಡಲಾಗಿದೆ. ಅವರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಎಂದು ಉದಯ ಕುಮಾರ್ ಹಟ್ಟಿಯಂಗಡಿ ತಿಳಿಸಿದರು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘದ ಬಗ್ವಾಡಿ ಹೋಬಳಿ ಮಾಜಿ ಅಧ್ಯಕ್ಷರಾದ ಎಂ.ಎಂ.ಸುವರ್ಣ, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ ಕಾಂಚನ್, ಮಾಜಿ ಅಧ್ಯಕ್ಷ ಲೋಹಿತಾಶ್ವ ಆರ್.ಕುಂದರ್, ಮಹೇಶ್ ನೆಂಪು, ಸುಕೇಶ್ ಮೊದಲಾದವರು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!