spot_img
Wednesday, April 1, 2026
spot_img

ಜ.12ರಂದು ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಎಸ್ ಬಂಗಾರಪ್ಪ ಸಭಾ ಭವನ ಉದ್ಘಾಟನೆ

ಕೋಟ: ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಎಸ್ ಬಂಗಾರಪ್ಪ ಸಭಾ ಭವನವು ಜನವರಿ 12 ರಂದು ಭಾನುವಾರ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ. ಸಹಕಾರಿ ಸಚಿವರಾದ ಕೆ. ಎನ್. ರಾಜಣ್ಣನವರು ಸಂಘದ ಸ್ವಂತ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಎಸ್. ಬಂಗಾರಪ್ಪ ಸಭಾಭವನವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್. ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ ಎಂದು ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ತಿಳಿಸಿದ್ದಾರೆ.

ಅವರು ಜ.9ರಂದು ಸಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಕಛೇರಿಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎಸ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಶಾಖಾ ಕಛೇರಿಯನ್ನು ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸುವರು. ಆಡಳಿತ ಮಂಡಳಿ ಸಭಾಂಗಣವನ್ನು ಸಂಸದರಾದ ಕೆ. ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಗ್ರಾಹಕರ ಭದ್ರತಾ ಕೋಶದ ಉದ್ಘಾಟನೆಯನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ನೆರವೇರಿಸುವರು. ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ನೆರವೇರಿಸಲಿದ್ದಾರೆ. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ನೆರವೇರಿಸುವರು.

ಸಂಭ್ರಮ’ ನಗದು ಪತ್ರವನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ ಬಿಡುಗಡೆಗೊಳಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ಕೊರಗ ಪೂಜಾರಿಯವರು ವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾರ್ಕಳ ಶಾಸಕರಾದ ವಿ. ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಕಿಶೋರ್ ಕುಮಾರ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಮೂರ್ತೆದಾರರ ಮಹಾಮಂಡಳದ ಅಧ್ಯಕ್ಷ ಸತೀಶ್ ಉಳ್ಳೂರು, ರಾಷ್ಟ್ರೀಯ ಬಿಲ್ಲವರ ಮಹಾಮಂಡಳ (ರಿ.) ಮೂಲ್ಕಿ ಇದರ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಅಸೋಸಿಯೇಶನ್ ಮಂಗಳೂರು ಇದರ ಅಧ್ಯಕ್ಷರಾದ ನವೀನ್‍ಚಂದ್ರ ಸುವರ್ಣ, ವಿಶ್ವನಾಥ ಕ್ಷೇತ್ರ ಕಟಪಾಡಿ ಅಧ್ಯಕ್ಷರಾದ ಬಿ. ಎನ್. ಶಂಕರ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಕೆ. ಆರ್ ಲಾವಣ್ಯ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ಸುಕನ್ಯ, ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ಮಂಗಳೂರು ಇದರ ಅಧ್ಯಕ್ಷರಾದ ಸಂಜೀವ ಪೂಜಾರಿ ಬೊಳ್ಳಾಯಿ. ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ. ಯವರಿಗೆ ಗೌರವಾರ್ಪಣೆ ನೀಡಲಾಗುವುದು.

ಜನವರಿ 12 ರಂದು ಬೆಳಿಗ್ಗೆ 8.30ಕ್ಕೆ ಕೋಟ ಅಮೃತೇಶ್ವರೀ ದೇವಸ್ಥಾನದಿಂದ ಸಹಕಾರ ಜಾಥಾ ನಡೆಯಲಿದೆ. ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಆನಂದ ಸಿ. ಕುಂದರ್ ಹಾಗೂ ಶ್ರೀ ಗುರುನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ  ಕೆ. ಎಸ್. ಕಾರಂತರವರು ಸಹಕಾರ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ. ಕೊರಗ ಪೂಜಾರಿ ಪೂಜಾರಿ, ಉಪಾಧ್ಯಕ್ಷರಾದ ಜಯರಾಮ ಪೂಜಾರಿ, ನಿರ್ದೇಶಕರು ಉಪಸ್ಥಿತರಿದ್ದರು.

 

 

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!