spot_img
Sunday, February 15, 2026
spot_img

ಅಂಬೇಡ್ಕರ್ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಡಾ.ಅಂಬೇಡ್ಕರ್ ರವರ ಕುರಿತು ಬಿಜೆಪಿಯವರ ಅಗೌರವದ ಹೇಳಿಕೆ :

ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡಿ, ಡಾ.ಅಂಬೇಡ್ಕರ್  ಅಭಿಯಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಾ. ಅಂಬೇಡ್ಕರ್ ಅವರ ಕುರಿತ ಅವರ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ. ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ :

ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ  ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.

ಆಶಾ ಕಾರ್ಯಕರ್ತರಿಗೆ 10,000 ರೂ. ಮಾಹೆಯಾನ :

ಆಶಾ ಕಾರ್ಯಕರ್ತರ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿ, ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ಮಾಹೆ 10,000 ರೂ.ಗಳ ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ ಹಾಗೂ ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ತಿಳಿಸಿದರು.

ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ:

ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.

ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ  ಮಾರ್ಗ ಎಂದು ಹೆಸರಿಡುವ ಬಗ್ಗೆ ರಾಜಕಾರಣ ನಡೆಯುತ್ತಿರುವ ಪ್ರತಿಕ್ರಿಯೆ ನೀಡಿ, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್  ನ್ನು ತಾನು ನಿರಾಕರಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!