spot_img
Monday, March 16, 2026
spot_img

ಬೆಂಗಳೂರು ಫಿಲ್ಮ್‌ ಫೆಸ್ಟಿವಲ್‌ : ಏಷಿಯನ್‌ ಸಿನಿಮಾ ಸ್ಪರ್ಧಾ ವಿಭಾಗಕ್ಕೆ ಚಲನಚಿತ್ರಗಳ ಆಹ್ವಾನ

ಜನಪ್ರತಿನಿಧಿ (ಬೆಂಗಳೂರು) : 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾರ್ಚ್‌ 1 ರಿಂದ 8ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಸರ್ವಜನಾಂಗದ ಶಾಂತಿಯ ತೋಟ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನೆಲೆ ಮೂರು ಸ್ಪರ್ಧಾ ವಿಭಾಗಗಳಿಗೆ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.

ಏಷಿಯನ್‌ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯದ್ದಾಗಿರಬೇಕು. ಜನವರಿ 1, 2024 ರಿಂದ ಡಿಸೆಂಬರ್‌ 31, 2024ರ ಒಳಗೆ ನಿರ್ಮಾಣಗೊಂಡಿರಬೇಕು. ಏಷ್ಯಾದ ಯಾವುದೇ ದೇಶದಲ್ಲಿ ತಯಾರಾದ ಚಿತ್ರಗಳನ್ನು ಕಳುಹಿಸಬಹುದು.

ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆಯು 2025ರ ಜನವರಿ 9 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 23ರವರೆಗೆ ಅವಕಾಶವಿದೆ. www.biffes.orgಮೂಲಕ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರತಿ ಚಿತ್ರಕ್ಕೂ ಪ್ರವೇಶ ಶುಲ್ಕ ₹3,000 ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ 8904645529, biffesblr@gmail.com & www.biffes.org ಸಂಪರ್ಕಿಸಬಹುದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!