spot_img
Monday, March 16, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಚುನಾವಣೆ: ಹೋರಾಟದ ಮೂಲಕ ಗೆಲುವು ಸಾಧಿಸಿದ ಎಸ್.ಪ್ರಕಾಶ್ಚಂದ್ರ ಶೆಟ್ಟಿ

ಜನಪ್ರತಿನಿಧಿ ವಾರ್ತೆ| (ಬೈಂದೂರು) ಜ.12: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಜ.12 ರಂದು ನಡೆದ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ನೇತೃತ್ವದ ರೈತಶಕ್ತಿ ಸಹಕಾರ ಒಕ್ಕೂಟ ಜಯ ಗಳಿಸಿದೆ. ಒಟ್ಟು 13 ಸ್ಥಾನಗಳ ಪೈಕಿ 11ಸ್ಥಾನಗಳಲ್ಲಿ ಜಯ ಗಳಿಸಿದೆ. 2ಸ್ಥಾನವನ್ನು ರೈತಬಂಧು ಒಕ್ಕೂಟ ಗೆದ್ದುಕೊಂಡಿದೆ.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು. ಜಿಲ್ಲೆಯಲ್ಲಿಯೇ ಈ ಪ್ರತಿಷ್ಟಿತ ಸಹಕಾರ ಕ್ಷೇತ್ರದ ಚುನಾವಣೆ ತನ್ನತ್ತ ಗಮನ ಸಳೆದಿತ್ತು. ಪ್ರಚಾರ, ಅಪಪ್ರಚಾರ ಎರಡು ಕೂಡಾ ನಡೆದಿತ್ತು. ಚುನಾವಣೆ ನಡೆದ ಇಂದು (ಜ.12) ಕೂಡಾ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಈ ನಡುವೆ ಇಬ್ಬರು ಅಭ್ಯರ್ಥಿಗಳ  ಅಭ್ಯರ್ಥಿತದ ವಿಚಾರ ಉಚ್ಛನ್ಯಾಯಾಲಯದ ಮೆಟ್ಟಿಲೇರಿತು.

ಉಚ್ಚನ್ಯಾಯಾಲಯವು ರಿಟ್ ಅರ್ಜಿಯನ್ನು ಪುರಸ್ಕರಿಸಿ, ಇಬ್ಬರ ನಾಮಪತ್ರ ತಿರಸ್ಕರಿಸಿ ಚುನಾವಣೆಯನ್ನು ನಡೆಸಲು ಆದೇಶಿಸಿತ್ತು. ಕೊನೆಗೂ ಎಸ್.ಪ್ರಕಾಶ್ಚಂದ್ರ ಶೆಟ್ಟಿ ನೇತೃತ್ವದ ತಂಡ ಗೆಲುವಿನ ನಗೆ ಬೀರಿದೆ.

ಪ್ರಕರಣ ನ್ಯಾಯಾಲಯ ದಲ್ಲಿರುವುದರಿಂದ ಪೂರ್ಣ ಪ್ರಮಾಣದ ಫಲಿತಾಂಶ ಘೋಷಣೆಯಾಗಿಲ್ಲ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!